ಮಂಗಳೂರು: ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿರುವ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಆಗಿರುವ ಮಂಜುನಾಥ ಭಂಡಾರಿ ಅವರನ್ನು ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪತ್ನಿ ಸಮೇತ ಭೇಟಿಯಾಗಿ ಅರೋಗ್ಯ ವಿಚಾರಿಸಿದರು.
ಮಂಜುನಾಥ ಭಂಡಾರಿ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ನಾರಾಯಣ ಹೃದಯಾಲಯದಲ್ಲಿ ದಾಖಲಾಗಿರುವ ಮಂಜುನಾಥ ಭಂಡಾರಿ ಅವರ ಅರೋಗ್ಯ ಸುಧಾರಿಸುತ್ತಿದ್ದು ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಇದೇ ಸಂದರ್ಭದಲ್ಲಿ ಖರ್ಗೆ ಶುಭ ಹಾರೈಸಿ ತೆರಳಿದರು. ಈ ಸಂದರ್ಭದಲ್ಲಿ ಮಂಜುನಾಥ ಭಂಡಾರಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು.