image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಜಿರೆ ರುಡ್‌ಸೆಟ್‌ನಲ್ಲಿ ಅಕೌಂಟಿಂಗ್ ಟ್ಯಾಲಿ ತರಬೇತಿ ಸಮಾರೋಪ

ಉಜಿರೆ : ಉಜಿರೆಯ RUDSET Institute ಸಂಸ್ಥೆಯಲ್ಲಿ ನಡೆದ ಅಕೌಂಟಿಂಗ್ ಟ್ಯಾಲಿ (Assistant Bookkeeper) ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಸಡಗರದಿಂದ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುರೇಶ್ ವಿಟ್ಲ ಅವರು ಮಾತನಾಡಿ, “ಇಂದಿನ ಆಧುನಿಕ ವ್ಯವಹಾರದಲ್ಲಿ ಲೆಕ್ಕಾಚಾರ ಅತ್ಯಂತ ಮಹತ್ವದ್ದಾಗಿದೆ. ತೆರಿಗೆ ಲೆಕ್ಕಾಚಾರವನ್ನು ವೃತ್ತಿಯಾಗಿ ಆಯ್ಕೆ ಮಾಡಬಹುದಾದಷ್ಟು ಅವಕಾಶಗಳು ಇಂದು ಲಭ್ಯವಿವೆ. ಇಂತಹ ಪ್ರಾಯೋಗಿಕ ಹಾಗೂ ಉದ್ಯೋಗೋನ್ಮುಖ ವಿದ್ಯೆಯನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ರುಡ್‌ಸೆಟ್ ಸಂಸ್ಥೆಯ ಮೂಲಕ ಉಚಿತವಾಗಿ ನೀಡುತ್ತಿರುವುದು ಅತ್ಯಂತ ಸಂತೋಷದ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತವೆ. ಅವನ್ನು ಸರಳವಾಗಿ ಮತ್ತು ಸುಲಭವಾಗಿ ನಿರ್ವಹಿಸಲು ನಿರಂತರ ಅಭ್ಯಾಸ ಅಗತ್ಯ. ಹೆಚ್ಚು ಅಭ್ಯಾಸ ಮಾಡಿ ತಮ್ಮ ಭವಿಷ್ಯವನ್ನು ಉಜ್ವಲವಾಗಿಸಿಕೊಳ್ಳಬೇಕು,” ಎಂದು ಸಲಹೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ನಿರ್ದೇಶಕರಾದ ಅಜೇಯ ಅವರು ವಹಿಸಿದ್ದರು. ಸಂಸ್ಥೆಯ ಹಿರಿಯರಾದ ಅಬ್ರಹಾಂ ಜೇಮ್ಸ್ ಅವರು ಅತಿಥಿಗಳನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಹಿರಿಯ ಉಪನ್ಯ

Category
ಕರಾವಳಿ ತರಂಗಿಣಿ