image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು ನಗರ ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಪಾಲಿಕೆ ಕಟ್ಟಡದಲ್ಲಿರುವ ಶಾಸಕರ ಕಚೇರಿಯಲ್ಲಿ  ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ಭರತ್‌ ಶೆಟ್ಟಿ ವೈ. ರವರ ಅಧ್ಯಕ್ಷತೆಯಲ್ಲಿ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

​ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತು ಶಾಸಕರು ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಸಭೆಯ ಪ್ರ
​ ಪ್ರಗತಿಯಲ್ಲಿರುವ ವಿವಿಧ ನಾಗರಿಕ ಸೌಲಭ್ಯಗಳ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.
​ಮಳೆಗಾಲಕ್ಕೆ ಮುನ್ನ ರಾಜಕಾಲುವೆ ಹಾಗೂ ಚರಂಡಿಗಳ ಹೂಳೆತ್ತುವ ಕಾರ್ಯವನ್ನು ಚುರುಕುಗೊಳಿಸುವ ಬಗ್ಗೆ ಚರ್ಚಿಸಿ, ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಲಾಯಿತು.
​ ನಗರದ ಕೆಲವು ಭಾಗಗಳಲ್ಲಿ ಎದುರಾಗುತ್ತಿರುವ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಗಮನಹರಿಸಿದ ಶಾಸಕರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆ ಹಾಗೂ ಶಾಶ್ವತ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
​ಸಭೆಯಲ್ಲಿ ಪಾಲಿಕೆಯ ಹಿರಿಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಪ್ರತಿನಿಧಿಗಳು ಉಪಸ್ಥಿತರಿದ್ದು, ಕಾಮಗಾರಿಗಳ ಪ್ರಸ್ತುತ ಸ್ಥಿತಿಗತಿಯ ಬಗ್ಗೆ ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ