image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ. ಭರತ್ ಶೆಟ್ಟಿ

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ತಪ್ಪಿಸಲು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಡಾ. ಭರತ್ ಶೆಟ್ಟಿ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ 22 ವಾರ್ಡ್‌ಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಪರಿಹಾರ ಹಾಗೂ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಶಾಸಕ ಡಾ. ವೈ. ಭರತ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಇರುವ ಶಾಸಕರ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ನಿಕಟಪೂರ್ವ ಪಾಲಿಕೆ ಸದಸ್ಯರು ಉಪಸ್ಥಿತರಿದ್ದರು.
ಮುಂಬರುವ ಬೇಸಿಗೆ ಸಂದರ್ಭದಲ್ಲಿ ಜನಸಾಮಾನ್ಯರಿಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನೀರು ಸರಬರಾಜು ವ್ಯವಸ್ಥೆಯನ್ನು ಸುಧಾರಿಸಲು ಹಾಗೂ ಸಮಸ್ಯೆ ಎದುರಾಗುವ ಪ್ರದೇಶಗಳಲ್ಲಿ ಮುಂಚಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಡಾ. ವೈ. ಭರತ್ ಶೆಟ್ಟಿ ಸೂಚನೆ ನೀಡಿದರು.
ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ನೀರಿನ ಕೊರತೆ ಉಂಟಾಗದಂತೆ ಸಮರ್ಪಕ ಯೋಜನೆ ರೂಪಿಸಿ ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ