ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಬರುವ ಮಾರ್ಚ್ 26, 27 ಮತ್ತು 28ರಂದು ಬಂಟ್ವಾಳ ಬಿ.ಸಿ ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಅದ್ಧೂರಿಯಾಗಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಾಹಿತ್ಯ ಜಾತ್ರೆಯ ಅಂಗವಾಗಿ ಸಮ್ಮೇಳನದ ಆವರಣದಲ್ಲಿ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಪ್ರಕಾಶಕರು ಮತ್ತು ಮಾರಾಟಗಾರರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಮಳಿಗೆಗಳ ವ್ಯವಸ್ಥೆಗಾಗಿ ಆಸಕ್ತರು ಮಾರ್ಚ್ 20ರ ಒಳಗಾಗಿ ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಅಬೂಬಕ್ಕರ್ ಅಮ್ಮಂಜೆ ಅವರ ಮೊಬೈಲ್ ಸಂಖ್ಯೆ 7619400376 ಅಥವಾ 9449386376 ಅನ್ನು ಸಂಪರ್ಕಿಸಿ ನೋಂದಾಯಿಸಿಕೊಳ್ಳಲು ಕೋರಲಾಗಿದೆ. ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಮ್ಮೇಳನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪ್ರಕಟಣೆ ತಿಳಿಸಿದೆ.