ಮಂಗಳೂರು: ಸ್ವಿಗ್ಗಿ ಇನ್‌ಸ್ಟಾ ಮಾರ್ಟ್ ಕಂಪೆನಿಯ ವತಿಯಿಂದ ಮಂಗಳೂರಿನಲ್ಲಿ ಖಾಲಿ ಇರುವ ಇನ್‌ಸೈಡ್ ಸ್ಟೋರ್ ಕೆಲಸಗಳಿಗಾಗಿ ಪಿಕ್ಕರ್, ಪ್ಯಾಕರ್ ಹಾಗೂ ಲೋಡಿಂಗ್ ಹುದ್ದೆಗಳಿಗೆ ಪಾರ್ಟ್ ಟೈಮ್ ಮತ್ತು ಫುಲ್ ಟೈಮ್ ಉದ್ಯೋಗಕ್ಕಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಈ ಸಂದರ್ಶನವು ಮಾರ್ಚ್ 13 ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:30 ರವರೆಗೆ ಪಡೀಲ್‌ನ ಜಿಲ್ಲಾಡಳಿತ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಎಸ್‌ಎಸ್‌ಎಲ್‌ಸಿ ಮತ್ತು ಅದಕ್ಕಿಂತ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಬಯೋಡೇಟಾದೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನದೊಂದಿಗೆ ಪಿಎಫ್, ಇಎಸ್‌ಐ ಮತ್ತು ಇನ್ಸೆಂಟಿವ್ ಸೌಲಭ್ಯಗಳು ದೊರೆಯಲಿವೆ. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.