image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ತಾಪ: ದಕ್ಷಿಣ ಕನ್ನಡದಲ್ಲಿ 39.6 ಡಿಗ್ರಿ ದಾಟಿದ ತಾಪಮಾನ

ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ತಾಪ: ದಕ್ಷಿಣ ಕನ್ನಡದಲ್ಲಿ 39.6 ಡಿಗ್ರಿ ದಾಟಿದ ತಾಪಮಾನ

ಮಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಮಾರ್ಚ್ 11ರ ಬೆಳಿಗ್ಗೆಯಿಂದ ಮಾರ್ಚ್ 12ರ ಬೆಳಿಗ್ಗೆಯ ಅವಧಿಯಲ್ಲಿ ದಾಖಲಾದ ಗರಿಷ್ಠ ತಾಪಮಾನದ ಅಂಕಿ-ಅಂಶಗಳು ಆತಂಕಕಾರಿಯಾಗಿವೆ. ಕರುನಾಡು ಬಿಸಿಲ ಬೇಗೆಗೆ ಬೆಂದು ಹೋಗುತ್ತಿದ್ದು, ಪ್ರಮುಖವಾಗಿ ಬೀದರ್ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗರಿಷ್ಠ 40.1°C ತಾಪಮಾನ ದಾಖಲಾಗುವ ಮೂಲಕ ರಾಜ್ಯದಲ್ಲೇ ಅತ್ಯಂತ ಹೆಚ್ಚು ಬಿಸಿಯಾದ ಜಿಲ್ಲೆಗಳಾಗಿ ಹೊರಹೊಮ್ಮಿವೆ.
ದಕ್ಷಿಣ ಕನ್ನಡ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತಲಾ 39.6°C ತಾಪಮಾನ ಕಂಡುಬಂದಿದ್ದರೆ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 39.5°C ತಾಪಮಾನ ದಾಖಲಾಗಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ. ರಾಜಧಾನಿ ಬೆಂಗಳೂರಿನಲ್ಲಿಯೂ ಸಹ ಬಿಸಿಲ ಝಳ ಅಧಿಕವಾಗಿದ್ದು, ಬೆಂಗಳೂರು ದಕ್ಷಿಣದಲ್ಲಿ 37.1°C, ನಗರ ಭಾಗದಲ್ಲಿ 36°C ಮತ್ತು ಗ್ರಾಮಾಂತರದಲ್ಲಿ 35.4°C ತಾಪಮಾನ ವರದಿಯಾಗಿದೆ. ಕೊಡಗು ಮತ್ತು ಚಿಕ್ಕಮಗಳೂರಿನಂತಹ ಮಲೆನಾಡು ಜಿಲ್ಲೆಗಳಲ್ಲಿಯೂ ತಾಪಮಾನ 38°C ದಾಟಿದ್ದು, ರಾಜ್ಯದಾದ್ಯಂತ ಸೆಖೆಯ ವಾತಾವರಣ ನಿರ್ಮಾಣವಾಗಿದೆ. ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.

Category
ಕರಾವಳಿ ತರಂಗಿಣಿ