image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಜಪೆಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಹಸಿವು ಮುಕ್ತ ಸಮಾಜದತ್ತ ಮಹತ್ವದ ಹೆಜ್ಜೆ-ದಿನೇಶ್ ಗುಂಡುರಾವ್

ಬಜಪೆಯಲ್ಲಿ ನೂತನ ಇಂದಿರಾ ಕ್ಯಾಂಟೀನ್ ಉದ್ಘಾಟನೆ; ಹಸಿವು ಮುಕ್ತ ಸಮಾಜದತ್ತ ಮಹತ್ವದ ಹೆಜ್ಜೆ-ದಿನೇಶ್ ಗುಂಡುರಾವ್

ಬಜಪೆ: ಬಜಪೆ ಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಶನಿವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾರ್ವಜನಿಕರ ದೀರ್ಘಕಾಲದ ನಿರೀಕ್ಷೆಯಂತೆ ಇಲ್ಲಿ ನೂತನವಾಗಿ ಇಂದಿರಾ ಕ್ಯಾಂಟೀನ್ ನಿರ್ಮಾಣಗೊಂಡಿದೆ. ಬಡವರು ಮತ್ತು ಜನಸಾಮಾನ್ಯರಿಗೆ ಅತ್ಯಂತ ಕಡಿಮೆ ದರದಲ್ಲಿ, ಅಚ್ಚುಕಟ್ಟಾದ ಪರಿಸರದಲ್ಲಿ ಗುಣಮಟ್ಟದ ಆಹಾರ ಒದಗಿಸುವುದು ನಮ್ಮ ಸರ್ಕಾರದ ಮುಖ್ಯ ಉದ್ದೇಶ. ಬಜಪೆಯ ಈ ಹೊಸ ಕ್ಯಾಂಟೀನ್ ಇಂದಿನಿಂದ ಸಾರ್ವಜನಿಕ ಸೇವೆಗೆ ಲಭ್ಯವಿದ್ದು, ಹಸಿವು ಮುಕ್ತ ಸಮಾಜದತ್ತ ನಮ್ಮ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ ಎ ಗಫೂರ್, ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ ಎಂ ಶಹೀದ್, ಜಿಲ್ಲಾಧಿಕಾರಿ ದರ್ಶನ್ ಎಚ್ ವಿ, ಬಜಪೆ ಪಟ್ಟಣ ಪಂಚಾಯತ್ ಅಧ್ಯಕ್ಷ ಲೋಕೇಶ್ ಪೂಜಾರಿ ಮತ್ತಿತರರು ಇದ್ದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ