ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ತುಳು ಪರಿಷತ್ ಜಂಟಿಯಾಗಿ ಇದೇ ಮಾರ್ಚ್ 20 ನೇ ತಾರೀಕಿನಂದು ಮಂಗಳೂರಿನ ತುಳು ಭವನದಲ್ಲಿ ಮೂರನೆಯ ವಿದ್ಯಾರ್ಥಿ ಸಮ್ಮೇಳನವನ್ನು ಆಯೋಜಿಸಿವೆ. ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತವಾಗಿರುವ ಈ ಸಮ್ಮೇಳನದ ಉದ್ಘಾಟನೆ ಮತ್ತು ಅಧ್ಯಕ್ಷತೆಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳೇ ವಹಿಸುತ್ತಿರುವುದು ವಿಶೇಷವಾಗಿದೆ.
ಅದಕ್ಕಾಗಿ ಆಯ್ಕೆ ಪ್ರಕ್ರಿಯೆಯು ಪೂರ್ಣಗೊಂಡಿದ್ದು, ಸಮ್ಮೇಳನದ ಉದ್ಘಾಟಕರಾಗಿ ದೇರಳಕಟ್ಟೆಯ ನಿಟ್ಟೆ ವಿದ್ಯಾಸಂಸ್ಥೆಯ ಸ್ನಾತಕೋತ್ತರ ವಿದ್ಯಾರ್ಥಿ ಶ್ರೀ ಪ್ರೀತಮ್ ನಾಯಕ್ ಹಾಗೂ ಸಮ್ಮೇಳನದ ಅಧ್ಯಕ್ಷರಾಗಿ ಬ್ರಹ್ಮಾವರದ ಎಸ್. ಎಮ್.ಎಸ್. ಕಾಲೇಜಿನ ಸ್ನಾತಕ ವಿದ್ಯಾರ್ಥಿನಿ ಕುಮಾರಿ ಅಭಿಜ್ಞಾ ಆಯ್ಕೆಯಾಗಿದ್ದಾರೆ ಎಂದು ತುಳು ಪರಿಷತ್ ಅಧ್ಯಕ್ಷರಾದ ಶ್ರೀ ಶುಭೋದಯ ಆಳ್ವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.