ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡ್‌ನ ನಾಲ್ಕು ಕೈ ಪಂಜುರ್ಲಿ ದೈವಸ್ಥಾನ ಹಾಗೂ ಬೆಂಗ್ರೆ ತೋಟ ಸಮೀಪ ಶಾಸಕರ ವಿಶೇಷ ಅನುದಾನದಡಿ ಹಮ್ಮಿಕೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಅಧಿಕೃತವಾಗಿ ಭೂಮಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ಬೆಂಗ್ರೆ ಭಾಗದ ನಿವಾಸಿಗಳ ದೀರ್ಘಕಾಲದ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ವಿಶೇಷ ಅನುದಾನವನ್ನು ಕ್ರೋಢೀಕರಿಸಲಾಗಿದೆ. ಇಲ್ಲಿನ ಮೂಲಸೌಕರ್ಯ ವೃದ್ಧಿಗೆ ನಾವು ಆದ್ಯತೆ ನೀಡಿದ್ದು, ನಿಗದಿತ ಸಮಯದೊಳಗೆ ಈ ಕಾಮಗಾರಿಗಳು ಗುಣಮಟ್ಟದೊಂದಿಗೆ ಪೂರ್ಣಗೊಳ್ಳಲಿವೆ," ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ಥಳೀಯ ಪ್ರಮುಖರಾದ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ ಹಾಗೂ ಜೀವನ್ ಖಾರ್ವಿ ಉಪಸ್ಥಿತರಿದ್ದರು.