image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾ. 24ರಿಂದ ಮಂಗಳೂರಿನಲ್ಲಿ ನಡೆಯಲಿದೆ ರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಮಹಾಸಮರ

ಮಾ. 24ರಿಂದ ಮಂಗಳೂರಿನಲ್ಲಿ ನಡೆಯಲಿದೆ ರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಮಹಾಸಮರ

 ಮಂಗಳೂರು: ಕರಾವಳಿಯ ಕ್ರೀಡಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಲು ಮಂಗಳೂರು ಸಜ್ಜಾಗಿದ್ದು, ಮಾರ್ಚ್ 24 ರಿಂದ 28 ರವರೆಗೆ ನಗರದ ಟಿ.ವಿ. ರಮಣ ಪೈ ಸಭಾಂಗಣದಲ್ಲಿ ‘ರಾಷ್ಟ್ರ ಮಟ್ಟದ ಸೀನಿಯರ್ ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ 2026’ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಕರ್ನಾಟಕ ಪವರ್‌ಲಿಫ್ಟಿಂಗ್ ಅಸೋಸಿಯೇಶನ್ ಹಾಗೂ ಕಶಾರ್ಪ್ ಫಿಟ್ನೆಸ್ ವತಿಯಿಂದ ಆಯೋಜಿಸಲಾಗಿರುವ ಈ ಕ್ರೀಡಾಕೂಟದ ಕುರಿತು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಸತೀಶ್ ಕುಮಾರ್ ಕುದ್ರೋಳಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಐದು ದಿನಗಳ ಕಾಲ ನಡೆಯುವ ಈ ಬೃಹತ್ ಕ್ರೀಡಾಕೂಟದಲ್ಲಿ ದೇಶದ ವಿವಿಧ ರಾಜ್ಯಗಳಿಂದ 300ಕ್ಕೂ ಹೆಚ್ಚು ನುರಿತ ಪುರುಷ ಮತ್ತು ಮಹಿಳಾ ಪವರ್‌ಲಿಫ್ಟರ್‌ಗಳು ಪಾಲ್ಗೊಳ್ಳಲಿದ್ದಾರೆ. ಸ್ಪರ್ಧಾಳುಗಳು ಸ್ಕ್ವಾಟ್, ಬೆಂಚ್ ಪ್ರೆಸ್ ಮತ್ತು ಡೆಡ್‌ಲಿಫ್ಟ್ ವಿಭಾಗಗಳಲ್ಲಿ ತಮ್ಮ ಶಕ್ತಿ ಹಾಗೂ ತಾಂತ್ರಿಕ ಕೌಶಲ್ಯವನ್ನು ಪ್ರದರ್ಶಿಸಲಿದ್ದಾರೆ. ಈ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆಲ್ಲುವ ಕ್ರೀಡಾಪಟುಗಳು ಜೂನ್‌ನಲ್ಲಿ ಲಿಥುವೇನಿಯಾದಲ್ಲಿ ನಡೆಯಲಿರುವ ‘ವಿಶ್ವ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್’ನಲ್ಲಿ ಭಾರತವನ್ನು ಪ್ರತಿನಿಧಿಸುವ ಸುವರ್ಣ ಅವಕಾಶ ಪಡೆಯಲಿದ್ದಾರೆ. ಈ ಕಾರಣದಿಂದಾಗಿ ದೇಶದ ಶ್ರೇಷ್ಠ ಕ್ರೀಡಾಪಟುಗಳ ನಡುವೆ ತೀವ್ರ ಪೈಪೋಟಿ ನಿರೀಕ್ಷಿಸಲಾಗಿದೆ.
ಮಾರ್ಚ್ 24ರಂದು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಜಿಲ್ಲಾಧಿಕಾರಿಗಳು ಈ ಕ್ರೀಡಾಕೂಟವನ್ನು ಉದ್ಘಾಟಿಸಲಿದ್ದಾರೆ. ಅಂತಾರಾಷ್ಟ್ರೀಯ ಮಾನದಂಡಗಳನ್ವಯ ಆಯೋಜಿಸಲಾಗಿರುವ ಈ ಸ್ಪರ್ಧೆಯಲ್ಲಿ ಅತ್ಯಾಧುನಿಕ ಸಾಧನಗಳು, ಅನುಭವೀ ತಾಂತ್ರಿಕ ಅಧಿಕಾರಿಗಳು ಮತ್ತು ಕಟ್ಟುನಿಟ್ಟಿನ ಡೋಪಿಂಗ್ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಂತಾರಾಷ್ಟ್ರೀಯ ಪವರ್ ಲಿಫ್ಟರ್ ಪ್ರದೀಪ್ ಕುಮಾರ್ ಆಚಾರ್ಯ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ  ಎ. ಉಮೇಶ್ ಗಟ್ಟಿ, ಮಧುಚಂದ್ರ ಎಂ.ಎಂ. ಹಾಗೂ ಅಸೋಸಿಯೇಶನ್ ಕೋಶಾಧಿಕಾರಿ ಜಯರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ