image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದ ಪೊಲೀಸ್ ವರದಿ

ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದ ಪೊಲೀಸ್ ವರದಿ

ಮಂಗಳೂರು : ಮೂಡಬಿದ್ರೆ ಇನ್ಸ್​ಪೆಕ್ಟರ್​ ಸಂದೇಶ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಇನ್ಸ್‌ಪೆಕ್ಟರ್‌ ಸಂದೇಶ್ ವಿರುದ್ಧ ಮಾಡಿರುವ ಆರೋಪ ಸುಳ್ಳು ಎಂದು ಪೊಲೀಸ್ ವರದಿ ಹೇಳಿದೆ ಎಂದು ಹೇಳಲಾಗುತ್ತಿದೆ. ಮಾಧ್ಯಮಗಳ ಮುಂದೆ ಬಂದಿದ್ದ ಆ ಮಹಿಳೆಯರಿಗೆ ಕಿರುಕುಳ ನೀಡಿಲ್ಲ. ಪ್ರಚೋದನೆಗೆ ಒಳಪಟ್ಟು ಇನ್ಸ್‌ಪೆಕ್ಟರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಮಹಿಳೆಯರ ಆರೋಪ ಸುಳ್ಳು ಹಾಗೂ ಪ್ರೇರಿತ ಎಂಬುದು ಸಾಬೀತಾಗಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

ಮಂಗಳೂರೂ ನಗರ ಕಮಿಷನರೇಟ್ ವ್ಯಾಪ್ತಿಗೆ ಬರುವ ಮೂಡಬಿದ್ರೆ ಪೊಲೀಸ್ ಇನ್ಸ್​ಪೆಕ್ಟರ್​ ಸಂದೇಶ್ ಮೇಲೆ ಲೈಂಗಿಕ ಕಿರುಕುಳ ಮತ್ತು ಹಲ್ಲೆ ಆರೋಪ ಕೇಳಿಬಂದಿತ್ತು. ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಸಿಎಂ, ಗೃಹ ಸಚಿವರು ಸೇರಿದಂತೆ ಮಹಿಳಾ ಆಯೋಗಕ್ಕೂ ಈ ಬಗ್ಗೆ ದೂರು ನೀಡಿದ್ದರು. ಈ ಬೆನ್ನಲ್ಲೆ ಕೆಲ ಆಡಿಯೋ ಮತ್ತು ವಿಡಿಯೋ ಕೂಡ ವೈರಲ್ ಆಗಿದ್ದವು. ಮಹಿಳಾ ಆಯೋಗ, ಮಕ್ಕಳ ರಕ್ಷಣಾ ಆಯೋಗ ಸೇರಿದಂತೆ ಸರ್ಕಾರದಿಂದ ತನಿಖೆ ಮಾಡಲು ಪೊಲೀಸ್ ಕಮಿಷನರ್​ಗೆ ಸೂಚನೆ ಸಿಕ್ಕಿತ್ತು. ಮಂಗಳೂರು ಉತ್ತರ ಎಸಿಪಿ ಶ್ರೀಕಾಂತ್​ರಿಂದ ತನಿಖೆಯನ್ನು ಮಾಡಿಸಲಾಯ್ತು. ಇನ್ಸ್​ಪೆಕ್ಟರ್ ಸಂದೇಶ್​​ರನ್ನ ಅಮಾನತ್ತುಗೊಳಿಸಿ ತನಿಖೆ ಮುಂದುವೆರೆಸಿದ್ದರು. ಈಗ ಪ್ರಾಥಮಿಕ ತನಿಖೆ ವರದಿ ಬಂದಿದ್ದು, ಸುಮತಿ ನಾಯಕ್ ಮತ್ತು ಅವಿತಾ ಮಿನೇಜಸ್ ಮಾಡಿದ್ದ ಆರೋಪಗಳು ಸುಳ್ಳು ಎಂಬುವುದುಸಾಬೀತಾಗಿದೆ ಅಂತಾ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಸದ್ಯ ಈ ಪ್ರಕರಣ ಪೊಲೀಸ್ ಇಲಾಖೆ ಮತ್ತು ದೂರುದಾರರ ನಡುವೆ ತಿಕ್ಕಾಟಕ್ಕೆ ಕಾರಣವಾಗಿದೆ. ಸಂದೇಶ್ ಮೇಲೆ ತನಿಖೆ ಇಲ್ಲಿಗೆ ಮುಗಿಯುತ್ತಾ ಅಥವಾ ಮುಂದುವೆರೆಯುತ್ತಾ ಎಂದು ಕಾದುನೋಡಬೇಕಿದೆ.

Category
ಕರಾವಳಿ ತರಂಗಿಣಿ