image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾ.25 ರಂದು ಕೋಡಿಬೆಟ್ಟು ರಾಜಲಕ್ಷ್ಮಿ ಅವರ ‘ಲಲಿತ ಮಂಟಪ’ ಕೃತಿ ಬಿಡುಗಡೆ

ಮಾ.25 ರಂದು ಕೋಡಿಬೆಟ್ಟು ರಾಜಲಕ್ಷ್ಮಿ ಅವರ ‘ಲಲಿತ ಮಂಟಪ’ ಕೃತಿ ಬಿಡುಗಡೆ

ಮಂಗಳೂರು: ಹಿರಿಯ ಲೇಖಕಿ ಹಾಗೂ ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿ ಅವರು ರಚಿಸಿರುವ, ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಮತ್ತು ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮವು ಮಾರ್ಚ್ 25ರಂದು ಸಂಜೆ 5 ಗಂಟೆಗೆ ಮಂಗಳೂರಿನ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಾನಪದ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಹಾಗೂ ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಅವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ನೂತನ ಕೃತಿಯನ್ನು ಆಧರಿಸಿದ ‘ಗೆಜ್ಜೆ ಬರೆದ ಅಕ್ಷರ’ ಎಂಬ ವಿನೂತನ ರಂಗಪ್ರಯೋಗ ಪ್ರಸ್ತುತಿಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ. ಸಾಹಿತ್ಯ ಮತ್ತು ರಂಗಭೂಮಿ ಆಸಕ್ತರು ಈ ವಿಶೇಷ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

 

Category
ಕರಾವಳಿ ತರಂಗಿಣಿ