ಮಂಗಳೂರು: ಶ್ರೀಕ್ಷೇತ್ರ ಕುದ್ರೋಳಿಯ ಕೊರಗಪ್ಪ ಸಭಾಂಗಣದಲ್ಲಿ ಶ್ರೀ ಶಾರದಾ ಮಾತೆ, ಶ್ರೀ ಮಹಾಗಣಪತಿ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ವಿಶ್ವವಿಖ್ಯಾತ ಮಂಗಳೂರು ದಸರಾಕ್ಕೆ ಬುಧವಾರ ಚಾಲನೆ ದೊರಕಿತು.
ಶ್ರೀಕ್ಷೇತ್ರ ಕುದ್ರೋಳಿಯ ಅಭಿವೃದ್ಧಿ ರೂವಾರಿ, ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರು ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು.
ಶ್ರೀ ಶಾರದಾ ಮಾತೆಯನ್ನು ಹೊತ್ತುಕೊಂಡು ಕುದ್ರೋಳಿ ದೇವಸ್ಥಾನಕ್ಕೆ ಒಂದು ಸುತ್ತು ಬಂದು ಪ್ರತಿಷ್ಠಾಪನ ಮಂಟಪದಲ್ಲಿ ಇರಿಸಲಾಯಿತು. ಬಳಿಕ ಪುರೋಹಿತರು ಧಾರ್ಮಿಕ ವಿಧಿವಿಧಾನಗಳ ಪ್ರಕಾರ ಶ್ರೀ ಶಾರದಾಮಾತೆ ಪ್ರತಿಷ್ಠಾಪನೆ ನೆರವೇರಿಸಿದರು.
ಈ ವೇಳೆ ಶಾರದಾ ಪ್ರತಿಷ್ಠಾಪನಾ ಹುಲಿ ಬೊಕ್ಕಪಟ್ಣ ಇವರಿಂದ ಶಾರದಾಮಾತೆಯ ಮುಂಭಾಗ ಹುಲಿಕುಣಿತ ಸೇವೆ ಮಾಡಿದರು.
ಈ ಸಮಯದಲ್ಲಿ ಮಾತನಾಡಿದ ಶ್ರೀಕ್ಷೇತ್ರ ಕುದ್ರೋಳಿಯ ಕೋಶಾಧಿಕಾರಿ - ಪದ್ಮರಾಜ್ ಆರ್ "ಈ ಬಾರಿ ಕಣ್ಮನ ಸೆಳೆಯುವ ದಸರಾ ದರ್ಬಾರ್ ಮಂಟಪ ಎಲ್ಲರ ವಿಶೇಷವಾಗಿದೆ. ದರ್ಬಾರ್ ಮಂಟಪದ ಕಂಬಕಂಬಗಳಲ್ಲಿ ಶಿಲಾಬಾಲಿಕೆಯರು, ದಶಾವತಾರದ ಕಲಾಕೃತಿಗಳು ರಾರಾಜಿಸುತ್ತಿತ್ತು. ಎಲ್ಲೆಡೆ ಕಣ್ಣುಕೋರೈಸುವ ವಿದ್ಯುತ್ ದೀಪಾಲಂಕಾರದಲ್ಲಿ ದೇವಲೋಕವೇ ಧರೆಗಿಳಿದಂತೆ ಭಾಸವಾಗುತ್ತಿದೆ. ಮುಲ್ಕಿಯ ಚಂದ್ರಶೇಖರ ಸುವರ್ಣ ಅವರ ಸುವರ್ಣ ಆರ್ಟ್ಸ್ ತಂಡ ಈ ದಸರಾ ಮಂಟಪವನ್ನು ನಿರ್ಮಾಣ ಮಾಡಿದೆ. ಸಾವಿರಾರು ಭಕ್ತರು ಈ ಕಾರ್ಯಕ್ರಮದಲ್ಲಿ ಸಾಕ್ಷಿಯಾದರು" ಎಂದರು.