ಉಜಿರೆ : ಉಜಿರೆಯಲ್ಲಿ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾದ ಪಾಸ್ಟ್ ಪುಡ್ ತಯಾರಿಕೆ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ಉತ್ಸಾಹಭರಿತ ವಾತಾವರಣದಲ್ಲಿ ನೆರವೇರಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಅರುಣ ಕುಮಾರ್, ಉಜಿರೆ ದಿಶಾ ಸಮೂಹ ಸಂಸ್ಥೆಗಳ ಮಾಲಕರು, ಭಾಗವಹಿಸಿ ತಮ್ಮ ಉದ್ಯಮದ ಬೆಳವಣಿಗೆಯ ಪಯಣವನ್ನು ವಿವರಿಸಿದರು. ತಮ್ಮ ಭಾಷಣದಲ್ಲಿ ಅವರು ಆಹಾರ ಉತ್ಪನ್ನ ಕ್ಷೇತ್ರದಲ್ಲಿ ಶುಚಿ ಮತ್ತು ರುಚಿಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ತಿಳಿಸಿದರು. ಗ್ರಾಹಕರ ವಿಶ್ವಾಸ ಗಳಿಸಲು ಗುಣಮಟ್ಟದ ಉತ್ಪನ್ನಗಳು ಅಗತ್ಯವಾಗಿದ್ದು, ಉದ್ಯಮದಲ್ಲಿ ಪರಿಶ್ರಮ, ಶಿಸ್ತಿನ ಜೊತೆಗೆ ಹೊಸತನವನ್ನು ನಿರಂತರವಾಗಿ ಅಳವಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ನಂತರ ತರಬೇತಿಗಾರರಿಗೆ ಪ್ರಮಾಣಪತ್ರಗಳನ್ನು ವಿತರಿಸಿ ಶುಭ ಹಾರೈಸಿದರು.
RUDSETI ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕರಾದ ಶ್ರೀ ವಿಜಯಕುಮಾರ್ ಬಿ.ಪಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ಯಾಂಕುಗಳ ಸಹಾಯವನ್ನು ಸಮರ್ಪಕವಾಗಿ ಬಳಸಿಕೊಂಡು ಸ್ವ ಉದ್ಯೋಗದಲ್ಲಿ ಯಶಸ್ಸು ಸಾಧಿಸಬಹುದು ಎಂದು ಹೇಳಿದರು. ಸಂಸ್ಥೆಯ ನಿರ್ದೇಶಕರಾದ ಶ್ರೀ ಅಜಯ್ ಅವರು ಅತಿಥಿಗಳನ್ನು ಸ್ವಾಗತಿಸಿ, ತರಬೇತಿ ಕಾರ್ಯಕ್ರಮದ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿದರು. ಹಿರಿಯ ಉಪನ್ಯಾಸಕರಾದ ಶ್ರೀ ಅಬ್ರಹಾಂ ಜೇಮ್ಸ್ ಪಿ.ವಿ. ಕಾರ್ಯಕ್ರಮವನ್ನು ನಿರ್ವಹಿಸಿದರು. ಹಿರಿಯ ಉಪನ್ಯಾಸಕರಾದ ಶ್ರೀ ಕೆ. ಕರುಣಾಕರ ಜೈನ್ ಅವರು ಧನ್ಯವಾದಗಳನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಅರುಣ ಪ್ರಾರ್ಥನೆ ನೆರವೇರಿಸಿದರು. ತರಬೇತಿಗಾರರಾದ ಶ್ರೀ ಅಶ್ವಥ್, ಶ್ರೀಮತಿ ಆಶ್ವಿನಿ ಮತ್ತು ಶ್ರೀಮತಿ ಮಂಗಳಾದೇವಿ ತಮ್ಮ ತರಬೇತಿ ಅನುಭವಗಳನ್ನು ಹಂಚಿಕೊಂಡು ಸಂಸ್ಥೆಯತ್ತ ಕೃತಜ್ಞತೆ ಸಲ್ಲಿಸಿದರು.