image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

​ಉಜಿರೆ ಎಸ್‌ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿಗಳ ದಿನಾಚರಣೆ: ಮಾರ್ಚ್ 29ರಂದು

​ಉಜಿರೆ ಎಸ್‌ಡಿಎಂ ಕಾಲೇಜು ಹಳೆಯ ವಿದ್ಯಾರ್ಥಿಗಳ ದಿನಾಚರಣೆ: ಮಾರ್ಚ್ 29ರಂದು

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಸ್ವಾಯತ್ತ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ 'ಹಳೆಯ ವಿದ್ಯಾರ್ಥಿಗಳ ದಿನಾಚರಣೆ' ಕಾರ್ಯಕ್ರಮವು ಮಾರ್ಚ್ 29ರಂದು ಕಾಲೇಜಿನ ಆವರಣದಲ್ಲಿ ನಡೆಯಲಿದೆ. ಅಂದು ಸಂಜೆ 5.30ಕ್ಕೆ ಕಾರ್ಯಕ್ರಮವು ಆರಂಭವಾಗಲಿದೆ. ಈ ವಿಶೇಷ ಸಮಾರಂಭವನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜ ಅವರು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರಿನ ಜಂಟಿ ಕೃಷಿ ನಿರ್ದೇಶಕ ಪಿ. ರವಿ ಕುಮಾರ್ ಹಾಗೂ ಬೆಂಗಳೂರಿನ ಕೆ.ಪಿ.ಟಿ.ಸಿ.ಎಲ್. ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕುಮಾರ್ ರೈ ಅವರು ಭಾಗವಹಿಸಲಿದ್ದಾರೆ. ಎಸ್‌ಡಿಎಂ ಹಳೆಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ. ವಿಶ್ವನಾಥ್ ಪಿ. ಅವರು ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಕಾಲೇಜಿನ ಪ್ರಾಂಶುಪಾಲರಾದ ಡಾ. ಬಿ.ಎ. ಕುಮಾರ್ ಹೆಗ್ಡೆ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಸಂಘಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಗಿದೆ.

Category
ಕರಾವಳಿ ತರಂಗಿಣಿ