image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

S.D.M. ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾರ್ಚ್ 28 ರಂದು ವಾರ್ಷಿಕೋತ್ಸವ

S.D.M. ಶಿಕ್ಷಣ ಸಂಸ್ಥೆಗಳ ವತಿಯಿಂದ ಮಾರ್ಚ್ 28 ರಂದು ವಾರ್ಷಿಕೋತ್ಸವ

S.D.M. ಶಿಕ್ಷಣ ಸಂಸ್ಥೆಗಳ ವತಿಯಿಂದ ವಾರ್ಷಿಕೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವು ಮಾರ್ಚ್ 28 ರಂದು ಸಂಜೆ 5.30ಕ್ಕೆ ಜರುಗಲಿದೆ. ಪೂಜ್ಯ ಹೆಗ್ಗಡೆಯವರ ಆಶೀರ್ವಾದದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನವು ವೇದಿಕೆಯಾಗಲಿದೆ.​ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಸ್.ಆರ್.ಪಿ ಘಟಕದ ಕಮಾಂಡೆಂಟ್ ಆಗಿರುವ ಡಾ. ವಿನಯ್ ಕುಮಾರ್ ಭಂಡಾರಿ ಅವರು ಭಾಗವಹಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರು ಹಾಗೂ ಧರ್ಮಸ್ಥಳದ ಪಟ್ಟಾಧಿಕಾರಿಗಳಾದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ವೇದಿಕೆಯಲ್ಲಿ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಪದಾಧಿಕಾರಿಗಳಾದ ಶ್ರೀ ಡಿ. ಹರ್ಷೇಂದ್ರ ಕುಮಾರ್ ಮತ್ತು ಕಾರ್ಯದರ್ಶಿಗಳಾದ ಡಾ. ಸತೀಶ್ಚಂದ್ರ ಅವರು ಉಪಸ್ಥಿತರಿರಲಿದ್ದು, ಎಲ್ಲ ಗಣ್ಯರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಗುವುದು.

Category
ಕರಾವಳಿ ತರಂಗಿಣಿ