image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆ

ಶ್ರೀನಿವಾಸ ವಿಶ್ವವಿದ್ಯಾಲಯದ 8ನೇ ವಾರ್ಷಿಕ ಘಟಿಕೋತ್ಸವ ಹಾಗೂ ವಿವಿಧ ಕಾರ್ಯಕ್ರಮಗಳ ಆಯೋಜನೆ

ಮಂಗಳೂರು: ನಗರದ ಶ್ರೀನಿವಾಸ ವಿಶ್ವವಿದ್ಯಾಲಯವು ತನ್ನ 8ನೇ ವಾರ್ಷಿಕ ಘಟಿಕೋತ್ಸವ, ಪದವಿ ಪ್ರದಾನ ಸಮಾರಂಭ, ಸಂಸ್ಥಾಪಕರ ದಿನಾಚರಣೆ ಮತ್ತು ಕಾಲೇಜು ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲು ಸಜ್ಜಾಗಿದೆ.  ಮಾರ್ಚ್ 28 ರಿಂದ ಮಾರ್ಚ್ 31ರವರೆಗೆ ಸರಣಿ ಕಾರ್ಯಕ್ರಮಗಳು ನಡೆಯಲಿವೆ ಎಂದು  ಡಾ. ಶ್ರೀನಿವಾಸ್ ಮಯ್ಯ ಹೇಳಿದರು.

ಅವರು ನಗರದ ಖಾಸಗಿ ಹೊಟೇಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ​ಮಾರ್ಚ್ 28 ರಂದು ಬೆಳಿಗ್ಗೆ 10:00 ಗಂಟೆಗೆ ವಿಶ್ವವಿದ್ಯಾಲಯದ ಮುಖ್ಯ ಕ್ಯಾಂಪಸ್‌ನಲ್ಲಿ 8ನೇ ವಾರ್ಷಿಕ ಘಟಿಕೋತ್ಸವ ನಡೆಯಲಿದ್ದು, ಕರ್ನಾಟಕ ಬ್ಯಾಂಕ್‌ನ ಎಂಡಿ ಮತ್ತು ಸಿಇಒ ಶ್ರೀ ರಾಘವೇಂದ್ರ ಶ್ರೀನಿವಾಸ್ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಅಂದು ಮಧ್ಯಾಹ್ನ 3:00 ಗಂಟೆಗೆ ನಡೆಯುವ ಸಮಾರಂಭದಲ್ಲಿ ಮಂಗಳೂರು ಕೆಐಒಸಿಎಲ್ ಲಿಮಿಟೆಡ್‌ನ ಶ್ರೀ ಗಾಂತಿ ವೆಂಕಟ್ ಕಿರಣ್ ಮುಖ್ಯಾತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಈ ಬಾರಿಯ ಘಟಿಕೋತ್ಸವದಲ್ಲಿ ಒಟ್ಟು 2769 ಪದವೀಧರರು ಪದವಿ ಸ್ವೀಕರಿಸಲಿದ್ದು, 48 ವಿದ್ಯಾರ್ಥಿಗಳಿಗೆ ಕುಲಾಧಿಪತಿಗಳ ಚಿನ್ನದ ಪದಕ ಹಾಗೂ 236 ರ‍್ಯಾಂಕ್‌ಗಳನ್ನು ಘೋಷಿಸಲಾಗಿದೆ. ಇದೇ ಸಂದರ್ಭದಲ್ಲಿ ಮಣಿಪಾಲ ಮೀಡಿಯಾ ನೆಟ್‌ವರ್ಕ್ ಲಿಮಿಟೆಡ್‌ನ ನಿರ್ದೇಶಕರಾದ ಶ್ರೀ ಟಿ. ಸತೀಶ್ ಯು. ಪೈ ಅವರಿಗೆ ಗೌರವ ಡಾಕ್ಟರೇಟ್ (ಡಿ.ಲಿಟ್.) ಪದವಿ ಪ್ರದಾನ ಮಾಡಲಾಗುವುದು.

​ಮಾರ್ಚ್ 29 ರಂದು ಶ್ರೀನಿವಾಸ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪದವಿ ಪ್ರದಾನ ಕಾರ್ಯಕ್ರಮ ನಡೆಯಲಿದ್ದು, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌ನ ಶ್ರೀ ಅರವಿಂದ ಹೊಳ್ಳ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಮಾರ್ಚ್ 30 ರಂದು ವಿದ್ಯಾರ್ಥಿಗಳ ಪ್ರತಿಭಾ ದಿನಾಚರಣೆ ಹಾಗೂ ಮಾರ್ಚ್ 31 ರಂದು ಸಂಸ್ಥಾಪಕರ ದಿನಾಚರಣೆ ಮತ್ತು ಕಾಲೇಜು ದಿನಾಚರಣೆ ನಡೆಯಲಿದೆ. ಸಂಸ್ಥಾಪಕರ ದಿನಾಚರಣೆಯ ಮುಖ್ಯ ಅತಿಥಿಯಾಗಿ ನ್ಯೂ ಮಂಗಳೂರು ಪೋರ್ಟ್ ಅಥಾರಿಟಿಯ ಉಪಾಧ್ಯಕ್ಷರಾದ ಶ್ರೀಮತಿ ಎಸ್. ಶಾಂತಿ ಪಾಲ್ಗೊಳ್ಳಲಿದ್ದಾರೆ.
​ಇದೇ ಸಂದರ್ಭದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಇಬ್ಬರು ಶಿಕ್ಷಕರಿಗೆ 'ಎ. ಶಾಮರಾವ್ ಸ್ಮಾರಕ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2026' ಅನ್ನು ನೀಡಿ ಗೌರವಿಸಲಾಗುವುದು. ಈ ವರ್ಷ ಸರ್ಕಾರಿ ಪ್ರೌಢಶಾಲೆ ಕಡಬದ ಉಪ ಮುಖ್ಯೋಪಾಧ್ಯಾಯಿನಿ ಡಾ. ವೇದಾವತಿ ಬಿ. ಮತ್ತು ಕೊಂಚಾಡಿಯ ಶ್ರೀ ರಾಮಕೃಷ್ಣ ಸಂಸ್ಥೆಯ ಪ್ರಾಂಶುಪಾಲ ಶ್ರೀ ರಾಜೇಶ್ ಕದ್ರಿ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ವಹಿಸಲಿದ್ದಾರೆ
ಪತ್ರಿಕಾಗೋಷ್ಠಿಯಲ್ಲಿ ಡಾ. ಅನಿಲ್ ಕುಮಾರ್, ಡಾ.ಅಜಯ್ ಕುಮಾರ್, ಡಾ. ರಾಮಕೃಷ್ಣ ಶಬರಾಯ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ