ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ 60ನೇ ಬೆಂಗ್ರೆ ವಾರ್ಡ್‌ನ ಶ್ರೀ ಆದಿ ನಾಗದೇವರ ಬನ ಸ್ಯಾಂಡ್‌ಪಿಟ್ ಪರಿಸರದಲ್ಲಿ ಹೊಸ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗಿದೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಭೂಮಿ ಪೂಜೆ ನೆರವೇರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಬೆಂಗ್ರೆ ಪ್ರದೇಶದ ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಂತೆ ಈ ಅಭಿವೃದ್ಧಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ನಡೆಯುತ್ತಿರುವ ಈ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ಅತೀ ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಕಡಕ್ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಮುಖರಾದ ಲೋಕೇಶ್ ಬೆಂಗ್ರೆ, ಮೀರಾ ಕರ್ಕೇರ, ನಿತಿನ್ ಕುಮಾರ್, ವಿನೋದ್ ಮೆಂಡನ್, ಅನಿಲ್, ಕಿಶೋರ್ ಕೊಟ್ಟಾರಿ, ಸುರೇಂದ್ರ ಪಾಂಗಳ್, ಗಂಗಾಧರ, ಸಂಜಯ್ ಸುವರ್ಣ, ಧನಂಜಯ ಪುತ್ರನ್, ಚೇತನ್ ಬೆಂಗ್ರೆ, ವಿಥುನ್, ವಾಸು ಸುವರ್ಣ, ಸುಂದರ ಸಾಲ್ಯಾನ್, ಸುಕುಮಾರ ಹಾಗೂ ಜೀವನ್ ಖಾರ್ವಿ ಉಪಸ್ಥಿತರಿದ್ದರು.