ಮಂಗಳೂರು; ಅತ್ತಾವರದಲ್ಲಿರುವ ಕ್ಯಾಸಾ ಗ್ರಾಂಡೆ ಅಪಾರ್ಟ್‌ಮೆಂಟ್‌ನ 12ನೇ ಮಹಡಿಯಿಂದ ಬಿದ್ದು ವೈದ್ಯಕೀಯ ವಿದ್ಯಾರ್ಥಿಯೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಮಾರ್ಚ್ 30ರಂದು ನಡೆದಿದೆ. ಮೃತರನ್ನು ಉತ್ತರ ಭಾರತ ಮೂಲದ ಸಾರ್ಥಕ್ ಮೌರ್ಯ (22) ಎಂದು ಗುರುತಿಸಲಾಗಿದೆ. ಈತ ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಘಟನೆಯು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪಾಂಡೇಶ್ವರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಾರ್ಥಕ್ ಮೂಲತಃ ಹಾಸ್ಟೆಲ್‌ನಲ್ಲಿ ವಾಸವಿದ್ದನು, ಆದರೆ ಘಟನೆ ನಡೆದ ಸಮಯದಲ್ಲಿ ಅವನು ಈ ಅಪಾರ್ಟ್‌ಮೆಂಟ್‌ಗೆ ಏಕೆ ಬಂದಿದ್ದನು ಎಂಬುದು ಇನ್ನೂ ನಿಖರವಾಗಿ ತಿಳಿದುಬಂದಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮೃತನ ಪೋಷಕರು ಮಂಗಳೂರಿಗೆ ಆಗಮಿಸಿದ ನಂತರ ಹೆಚ್ಚಿನ ವಿಚಾರಣೆ ನಡೆಯಲಿದೆ. ಸಾರ್ಥಕ್ ಈ ರೀತಿಯ ವಿಪರೀತ ನಿರ್ಧಾರ ತೆಗೆದುಕೊಳ್ಳಲು ನಿಖರವಾದ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ. ಈ ಅನಿರೀಕ್ಷಿತ ಸಾವು ವಿದ್ಯಾರ್ಥಿ ವಲಯದಲ್ಲಿ ತೀವ್ರ ಆಘಾತವನ್ನುಂಟುಮಾಡಿದೆ.