ಮಂಗಳೂರು: ನಗರದ ಹೊರವಲಯದ ಪ್ರಸಿದ್ಧ ಪ್ರವಾಸಿ ತಾಣವಾದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ (ಮೃಗಾಲಯ) ತುರ್ತು ನಿರ್ವಹಣೆ ಹಾಗೂ ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಏಪ್ರಿಲ್ 1 ರಿಂದ ಏಪ್ರಿಲ್ 8 ರವರೆಗೆ ಸಾರ್ವಜನಿಕರ ವೀಕ್ಷಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮೃಗಾಲಯದ ಆವರಣದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೆಲಸಗಳು ನಡೆಯುತ್ತಿವೆ. ಪ್ರವಾಸಿಗರ ಸುರಕ್ಷತೆ ಹಾಗೂ ಕಾಮಗಾರಿಯ ಸುಗಮ ನಿರ್ವಹಣೆಯ ದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.