image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್. ಶೆಟ್ಟಿ ಅವರಿಗೆ ಏಪ್ರಿಲ್ 4 ರಂದು ಶ್ರದ್ಧಾಂಜಲಿ ಸಭೆ

ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್. ಶೆಟ್ಟಿ ಅವರಿಗೆ ಏಪ್ರಿಲ್ 4 ರಂದು ಶ್ರದ್ಧಾಂಜಲಿ ಸಭೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿಯಾಗಿದ್ದ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್. ಶೆಟ್ಟಿ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಸ್ಮರಣಾರ್ಥ ನುಡಿನಮನ ಹಾಗೂ ಶ್ರದ್ಧಾಂಜಲಿ ಸಭೆಯನ್ನು ಏಪ್ರಿಲ್ 4 ರಂದು ಶನಿವಾರ ಸಂಜೆ 5 ಗಂಟೆಗೆ ಆಯೋಜಿಸಲಾಗಿದೆ.

ನಗರದ ಬಂಟ್ಸ್ ಹಾಸ್ಟೇಲ್ ಸಂಕೀರ್ಣದಲ್ಲಿರುವ ಶ್ರೀಮತಿ ಗೀತಾ ಎಸ್. ಎಂ. ಶೆಟ್ಟಿ ಸಭಾಂಗಣದಲ್ಲಿ ಈ ಸಭೆಯು ನಡೆಯಲಿದ್ದು, ಸಮಾಜದ ಗಣ್ಯರು ಹಾಗೂ ಬಂಧು-ಮಿತ್ರರು ಪಾಲ್ಗೊಳ್ಳಲಿದ್ದಾರೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ