image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಕರಂಗಲ್ಪಾಡಿಯಲ್ಲಿ ಏಪ್ರಿಲ್ 4 ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

ಕರಂಗಲ್ಪಾಡಿಯಲ್ಲಿ ಏಪ್ರಿಲ್ 4 ರಂದು ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ

ಮಂಗಳೂರು: ನಗರದ ಕರಂಗಲ್ಪಾಡಿಯ ಶ್ರೀ ಮಹಾಸತಿ ಹಾಗೂ ಶ್ರೀ ಭಗವತಿ ಅಮ್ಮನವರ ಸನ್ನಿಧಿಯಲ್ಲಿ ಏಪ್ರಿಲ್ 4ರ ಶನಿವಾರದಂದು 'ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ' ಯಕ್ಷಗಾನ ಬಯಲಾಟ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರ ಸುದನ್ ವಿದ್ಯಾನಗರ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ,

​ಅಂದು ಬೆಳಿಗ್ಗೆ 5 ಗಂಟೆಗೆ ಶ್ರೀ ಕೃಷ್ಣ ಅಡಿಗರ ನೇತೃತ್ವದಲ್ಲಿ ಗಣಹೋಮ ಮತ್ತು ಸಾಮೂಹಿಕ ಪ್ರಾರ್ಥನೆ ನಡೆಯಲಿದ್ದು, ಮಧ್ಯಾಹ್ನ 12:30ಕ್ಕೆ ಅಮ್ಮನವರಿಗೆ ಸಾಮೂಹಿಕ ಪೂಜೆ ಹಾಗೂ ಪ್ರಾರ್ಥನೆ ನೆರವೇರಲಿದೆ. ಸಂಜೆ 4:00 ಗಂಟೆಗೆ ಕದ್ರಿ ಮಂಜುನಾಥ ದೇವಸ್ಥಾನದಿಂದ ಹೊರಡುವ ನೂತನ ರಜತ ಕವಚ, ಪ್ರಭಾವಳಿ ಹಾಗೂ ನಂದಾದೀಪದ ಭವ್ಯ ಮೆರವಣಿಗೆಯನ್ನು ಅಮ್ಮನವರ ಸನ್ನಿಧಿಗೆ ತಂದು ಒಪ್ಪಿಸಲಾಗುವುದು.

ಸಂಜೆ 6:30ಕ್ಕೆ ಸಭಾ ಕಾರ್ಯಕ್ರಮ ಜರುಗಲಿದ್ದು, ರಾತ್ರಿ 8 ಗಂಟೆಗೆ ಶ್ರೀ ಕ್ಷೇತ್ರ ಬಪ್ಪನಾಡು ದುರ್ಗಾಪರಮೇಶ್ವರಿ ಅಮ್ಮನವರಿಗೆ ಚೌಕಿ ಪೂಜೆಯ ಬಳಿಕ ಅನ್ನಪ್ರಸಾದ ವಿತರಣೆ ನಡೆಯಲಿದೆ. ತದನಂತರ ಸನ್ನಿಧಿಯ ಮುಂಭಾಗದ ರಂಗಸ್ಥಳದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದರು.  ಪತ್ರಿಕಾಗೋಷ್ಠಿಯಲ್ಲಿ ನವೀನ್ ಬಿಜೈ, ಗಿರೀಶ್ ಕುಲಶೇಖರ್, ಸತ್ಯಪ್ರಸಾದ್ ಪೊಳಲಿ, ರಜನೀಶ್ ಬಿಜೈ, ಚೇತನ್ ಜಪ್ಪನಮೊಗರು ಮತ್ತು ರವಿಚಂದ್ರ ಶೆಟ್ಟಿ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ