image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಎಸ್‌ಸಿಡಿಸಿಸಿ ಬ್ಯಾಂಕ್ ₹20,226 ಕೋಟಿ ದಾಖಲೆಯ ವ್ಯವಹಾರದೊಂದಿಗೆ ₹131 ಕೋಟಿ ನಿವ್ವಳ ಲಾಭ

ಎಸ್‌ಸಿಡಿಸಿಸಿ ಬ್ಯಾಂಕ್ ₹20,226 ಕೋಟಿ ದಾಖಲೆಯ ವ್ಯವಹಾರದೊಂದಿಗೆ ₹131 ಕೋಟಿ ನಿವ್ವಳ ಲಾಭ

ಮಂಗಳೂರು: ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ 112 ವರ್ಷಗಳ ಸುದೀರ್ಘ ಇತಿಹಾಸವಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (SCDCC Bank), 2025-26ನೇ ಆರ್ಥಿಕ ವರ್ಷದಲ್ಲಿ ಅತ್ಯಂತ ಯಶಸ್ವಿ ಪ್ರಗತಿ ದಾಖಲಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹೇಳಿದ್ದಾರೆ. ನಗರದ ಬ್ಯಾಂಕ್ ಬ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, 

ಬ್ಯಾಂಕ್ ಈ ಸಾಲಿನಲ್ಲಿ ಒಟ್ಟು ₹20,226.19 ಕೋಟಿಗಳ ದಾಖಲೆಯ ವ್ಯವಹಾರವನ್ನು ನಡೆಸಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಶೇ.16.47 ರಷ್ಟು ಅಭಿವೃದ್ಧಿ ಸಾಧಿಸಿದೆ. ಈ ಮೂಲಕ ₹131.14 ಕೋಟಿ ನಿವ್ವಳ ಲಾಭ ಗಳಿಸಿ ರಾಜ್ಯದ ಸಹಕಾರಿ ರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದೆ. ಯಾವುದೇ ಸರ್ಕಾರಿ ಠೇವಣಿ ಇಲ್ಲದೆಯೂ ಸಾರ್ವಜನಿಕರಿಂದ ₹9,264.64 ಕೋಟಿ ಠೇವಣಿ ಸಂಗ್ರಹಿಸಿರುವುದು ಬ್ಯಾಂಕಿನ ಮೇಲಿರುವ ಜನರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ. ಅಲ್ಲದೆ, ಕಳೆದ 31 ವರ್ಷಗಳಿಂದ ಕೃಷಿ ಸಾಲ ಮರುಪಾವತಿಯಲ್ಲಿ ಶೇ.100 ರಷ್ಟು ಸಾಧನೆ ಮಾಡಿರುವುದು ರಾಷ್ಟ್ರೀಯ ಮಟ್ಟದ ದಾಖಲೆಯಾಗಿದೆ.

ತಂತ್ರಜ್ಞಾನದ ಬಳಕೆಯಲ್ಲೂ ಮುಂಚೂಣಿಯಲ್ಲಿರುವ ಬ್ಯಾಂಕ್, ಯುಪಿಐ (UPI), ಐಎಂಪಿಎಸ್ (IMPS) ಮತ್ತು ಮೊಬೈಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಗ್ರಾಹಕರಿಗೆ ಒದಗಿಸುತ್ತಿದೆ. ರೈತರಿಗೆ ಅನುಕೂಲವಾಗುವಂತೆ 1.44 ಲಕ್ಷಕ್ಕೂ ಅಧಿಕ 'ರುಪೇ' ಕಿಸಾನ್ ಕಾರ್ಡ್‌ಗಳನ್ನು ವಿತರಿಸಲಾಗಿದ್ದು, 84,797 ರೈತರಿಗೆ ವೈಯಕ್ತಿಕ ಅಪಘಾತ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.

ಮುಂದಿನ ದಿನಗಳಲ್ಲಿ 10 ಹೊಸ ಶಾಖೆಗಳನ್ನು ತೆರೆಯುವ ಗುರಿ ಹೊಂದಲಾಗಿದ್ದು, 'ಬ್ಯಾಂಕ್ ಆನ್ ವೀಲ್ಸ್' ಮತ್ತು 'ಟ್ಯಾಬ್ ಬ್ಯಾಂಕಿಂಗ್' ಮೂಲಕ ಸೇವೆಯನ್ನು ಇನ್ನಷ್ಟು ಸರಳಗೊಳಿಸಲಾಗಿದೆ. 2026-27ನೇ ಸಾಲಿಗೆ ₹22,500 ಕೋಟಿ ವ್ಯವಹಾರದ ಗುರಿಯನ್ನು ಬ್ಯಾಂಕ್ ಹಾಕಿಕೊಂಡಿದೆ ಎಂದರು.

Category
ಕರಾವಳಿ ತರಂಗಿಣಿ