image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ 'ಯುರೇಕಾ-2026'

ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ 'ಯುರೇಕಾ-2026'

ಪುತ್ತೂರು : ಪುತ್ತೂರಿನ ನೆಹರು ನಗರದಲ್ಲಿರುವ ಪ್ರಸಿದ್ಧ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಸಿದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿರುವ ಆರು ದಿನಗಳ ರಾಜ್ಯಮಟ್ಟದ ವ್ಯಕ್ತಿತ್ವ ವಿಕಸನ ಶಿಬಿರ "ಯುರೇಕಾ-2026" ಏಪ್ರಿಲ್ 6 ರಿಂದ 11ರ ತನಕ ನಡೆಯಲಿದೆ.​ ಏಪ್ರಿಲ್ 6 ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಪುತ್ತೂರಿನ ವಿವೇಕಾನಂದ ಕೇಂದ್ರೀಯ ವಿದ್ಯಾಲಯದ ಸಂಚಾಲಕರಾದ ಭರತ್ ಪೈ ಅವರು ಶಿಬಿರವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ. ವಹಿಸಲಿದ್ದು, ಪ್ರಾಂಶುಪಾಲರಾದ ದೇವಿಚರಣ್ ರೈ ಎಂ ಅವರು ಉಪಸ್ಥಿತರಿರಲಿದ್ದಾರೆ.

​ಈ ಬಾರಿಯ ಶಿಬಿರದಲ್ಲಿ ಬೆಂಗಳೂರಿನ ಖ್ಯಾತ ಶೈಕ್ಷಣಿಕ ಸಲಹೆಗಾರ ರಾಜೇಶ್ ಭಟ್, ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದೆ ಹಾಗೂ ಪರಿಸರ ತಜ್ಞ ದಿನೇಶ್ ಹೊಳ್ಳ ಸೇರಿದಂತೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಿರಿಯ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಶಿಬಿರದಲ್ಲಿ ವ್ಯಕ್ತಿತ್ವ ವಿಕಸನ, ಜೀವನ ಕೌಶಲ್ಯ, ತಂತ್ರಜ್ಞಾನ, ಕಲೆ, ವಾಣಿಜ್ಯ ಮತ್ತು ವಿಜ್ಞಾನ ವಿಷಯಗಳ ಕುರಿತು ವಿಶೇಷ ಚಟುವಟಿಕೆಗಳು ಹಾಗೂ ಸಂವಾದಗಳು ನಡೆಯಲಿವೆ. ಪ್ರತಿದಿನ ಬೆಳಿಗ್ಗೆ 9 ರಿಂದ ಸಂಜೆ 3.30 ರವರೆಗೆ ಶಿಬಿರದ ಅವಧಿ ಇರಲಿದ್ದು, ದಕ್ಷಿಣ ಕನ್ನಡ, ಕಾಸರಗೋಡು ಸೇರಿದಂತೆ ರಾಜ್ಯದ ವಿವಿಧ ಮೂಲೆಗಳಿಂದ ವಿದ್ಯಾರ್ಥಿಗಳು ಆಗಮಿಸುವ ನಿರೀಕ್ಷೆಯಿದೆ. ದೂರದ ಊರುಗಳಿಂದ ಬರುವ ಶಿಬಿರಾರ್ಥಿಗಳಿಗೆ ಕಾಲೇಜಿನ ವತಿಯಿಂದ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಬೆಟ್ಟಂಪಾಡಿ, ಪೆರ್ಲ ಹಾಗೂ ಉಪ್ಪಿನಂಗಡಿಯಿಂದ ಕಾಲೇಜು ಬಸ್ ಸೌಲಭ್ಯ ಒದಗಿಸಲಾಗಿದೆ.

​ಆಸಕ್ತ ವಿದ್ಯಾರ್ಥಿಗಳು www.vivekanandapuc.com/eureka ಜಾಲತಾಣದ ಮೂಲಕ ಅಥವಾ 8095525692, 9961314385, 9972635348 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ. ಶಿಬಿರದಲ್ಲಿ ಪಾಲ್ಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಗುವುದು ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ