image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸುಭಾಷಿತ ನಗರದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

ಸುಭಾಷಿತ ನಗರದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ. ಭರತ್ ಶೆಟ್ಟಿ ಚಾಲನೆ

ಮಂಗಳೂರು: ಸುಭಾಷಿತ ನಗರದ 2ನೇ ಕ್ರಾಸ್ ಬಳಿಯ ಕಂಬಳ ರಸ್ತೆಯಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನೂತನ ತಡೆಗೋಡೆ ಕಾಮಗಾರಿಗೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ವೈ. ಭರತ್ ಶೆಟ್ಟಿ ಅವರು ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

​ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, ಸ್ಥಳೀಯರ ಬಹುದಿನಗಳ ಬೇಡಿಕೆಯಾಗಿದ್ದ ಈ ತಡೆಗೋಡೆ ನಿರ್ಮಾಣದಿಂದ ಮಳೆಗಾಲದಲ್ಲಿ ಎದುರಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ ಎಂದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಮನಪಾ ಸದಸ್ಯರಾದ ಶ್ವೇತಾ ಪೂಜಾರಿ, ವಾರ್ಡ್ ಅಧ್ಯಕ್ಷ ಸುರೇಂದ್ರ, ಬೂತ್ ಅಧ್ಯಕ್ಷ ಸಜಿತ್ ರಾಜ್, ಕಾರ್ಯದರ್ಶಿ ಪ್ರಹ್ಲಾದ್ ಶೆಟ್ಟಿ, ಮಹಾ ಶಕ್ತಿಕೇಂದ್ರದ ಅಧ್ಯಕ್ಷ ದಿನಕರ್ ಇಡ್ಯಾ ಹಾಗೂ ಸುರತ್ಕಲ್ ವ್ಯವಸಾಯ ಸಹಕಾರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ,  ಮಹಿಳಾ ಮೋರ್ಚಾ ಮಂಡಲ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮೀ ಚಂದ್ರಶೇಖರ ಆಚಾರ್ಯ, ಉಪಾಧ್ಯಕ್ಷೆ ಸುಲತಾ ಪೂಜಾರಿ, ವೃತ್ತಿಪರ ಪ್ರಕೋಷ್ಠದ ಸಹ ಸಂಚಾಲಕ ಬಾಬು ಚಂದ್ರ, OBC ಮೋರ್ಚಾ ಉಪಾಧ್ಯಕ್ಷ ಸುಧಾಕರ್ ಸೇರಿದಂತೆ ಪಕ್ಷದ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸ್ಥಳೀಯ ನಾಗರಿಕರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ