image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಅಪ್ರತಿಮ ಸಾಧನೆಯನ್ನು ಮುಂದುವರಿಸಿರುವ ಆಳ್ವಾಸ್ ಪದವಿಪೂರ್ವ ಕಾಲೇಜು

ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಅಪ್ರತಿಮ ಸಾಧನೆಯನ್ನು ಮುಂದುವರಿಸಿರುವ ಆಳ್ವಾಸ್ ಪದವಿಪೂರ್ವ ಕಾಲೇಜು

ಮೂಡುಬಿದಿರೆ: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಅಪ್ರತಿಮ ಸಾಧನೆಯನ್ನು ಮುಂದುವರಿಸಿರುವ ಇಲ್ಲಿನ ಆಳ್ವಾಸ್ ಪದವಿಪೂರ್ವ ಕಾಲೇಜು, 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಐತಿಹಾಸಿಕ ಫಲಿತಾಂಶ ದಾಖಲಿಸಿದೆ. ವಾಣಿಜ್ಯ ವಿಭಾಗದಲ್ಲಿ ಕಾಲೇಜಿನ ವಿದ್ಯಾರ್ಥಿನಿ ದಿಶಾ 600ಕ್ಕೆ 600 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಅಲಂಕರಿಸಿ ಸಾಧನೆಯ ಶಿಖರಕ್ಕೇರಿದ್ದಾರೆ. ಈ ಮೂಲಕ 2023ರಲ್ಲಿ ಅನನ್ಯ ಕೆ. ಅವರು ನಿರ್ಮಿಸಿದ್ದ ದಾಖಲೆಯನ್ನು ಕಾಲೇಜು ಮತ್ತೊಮ್ಮೆ ಪುನರಾವರ್ತಿಸಿದಂತಾಗಿದೆ. ವಿಜ್ಞಾನ ವಿಭಾಗದಲ್ಲೂ ಅದ್ಭುತ ಪ್ರದರ್ಶನ ತೋರಿರುವ ರಕ್ಷಿತಾ ಮಂಜುನಾಥ್ ಎಸ್. 598 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ. ಕೇವಲ ವೈಯಕ್ತಿಕ ಸಾಧನೆಯಷ್ಟೇ ಅಲ್ಲದೆ, ಸಮೂಹ ಸಾಧನೆಯಲ್ಲೂ ಆಳ್ವಾಸ್ ಮುಂಚೂಣಿಯಲ್ಲಿದ್ದು, ರಾಜ್ಯದ ಮೊದಲ ಹತ್ತು ರ‍್ಯಾಂಕ್‌ಗಳ ಪಟ್ಟಿಯಲ್ಲಿ ಕಾಲೇಜಿನ ಒಟ್ಟು 95 ವಿದ್ಯಾರ್ಥಿಗಳು ಸ್ಥಾನ ಪಡೆದಿರುವುದು ಗಮನಾರ್ಹ ಸಂಗತಿಯಾಗಿದೆ.

​ಫಲಿತಾಂಶದ ಅಂಕಿಅಂಶಗಳನ್ನು ಗಮನಿಸಿದರೆ, 687 ವಿದ್ಯಾರ್ಥಿಗಳು 95% ಕ್ಕಿಂತ ಹೆಚ್ಚು ಅಂಕ ಗಳಿಸಿದ್ದರೆ, 1557 ವಿದ್ಯಾರ್ಥಿಗಳು 90% ಕ್ಕಿಂತ ಅಧಿಕ ಹಾಗೂ 1892 ವಿದ್ಯಾರ್ಥಿಗಳು 85% ಕ್ಕಿಂತ ಹೆಚ್ಚು ಅಂಕಗಳೊಂದಿಗೆ ಅತ್ಯುನ್ನತ ಶ್ರೇಣಿಯಲ್ಲಿ (ಡಿಸ್ಟಿಂಕ್ಷನ್) ಉತ್ತೀರ್ಣರಾಗಿದ್ದಾರೆ. ಪಲ್ಲವಿ ಕೆ. ಸಿ (597), ಅಂಕಿತಾ ಬಸಪ್ಪ ಕೊನ್ನೂರ (596), ದಿಶಾ ಎಚ್ ಶೆಟ್ಟಿ (596) ಸೇರಿದಂತೆ ಹತ್ತಾರು ವಿದ್ಯಾರ್ಥಿಗಳು ಗರಿಷ್ಠ ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ. ವಿಷಯವಾರು ಫಲಿತಾಂಶದಲ್ಲೂ ಕಾಲೇಜು ದಾಖಲೆ ಬರೆದಿದ್ದು, ಗಣಿತದಲ್ಲಿ 199, ಸಂಸ್ಕೃತದಲ್ಲಿ 122 ಹಾಗೂ ಬಿಸಿನೆಸ್ ಸ್ಟಡೀಸ್ ಮತ್ತು ಕಂಪ್ಯೂಟರ್ ಸೈನ್ಸ್‌ನಲ್ಲಿ ತಲಾ 86 ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕ ಗಳಿಸಿದ್ದಾರೆ. ವಿಶೇಷವೆಂದರೆ, ಓರ್ವ ವಿದ್ಯಾರ್ಥಿ ಎಲ್ಲಾ 6 ವಿಷಯಗಳಲ್ಲಿ 100ಕ್ಕೆ 100 ಅಂಕ ಪಡೆದರೆ, ನಾಲ್ವರು ವಿದ್ಯಾರ್ಥಿಗಳು 5 ವಿಷಯಗಳಲ್ಲಿ ಪೂರ್ಣ ಅಂಕ ಗಳಿಸಿದ್ದಾರೆ. ಈ ಅದ್ಭುತ ಸಾಧನೆಯ ಸಂದರ್ಭದಲ್ಲಿ ಪ್ರಾಂಶುಪಾಲ ಪ್ರೊ. ಎಂ. ಸದಾಕತ್, ಉಪಪ್ರಾಂಶುಪಾಲೆ ಝಾನ್ಸಿ ಪಿ.ಎನ್. ಹಾಗೂ ವಿವಿಧ ವಿಭಾಗಗಳ ಡೀನ್‌ಗಳು ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿ ಅಭಿನಂದಿಸಿದ್ದಾರೆ.

Category
ಕರಾವಳಿ ತರಂಗಿಣಿ