image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ: ಏಪ್ರಿಲ್ 12ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನ: ಏಪ್ರಿಲ್ 12ರಂದು ಸಾಧಕರಿಗೆ ಪ್ರಶಸ್ತಿ ಪ್ರದಾನ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಬಹಿರಂಗ ಅಧಿವೇಶನವು ಏಪ್ರಿಲ್ 12ರಂದು ಬೆಳಿಗ್ಗೆ 9 ಗಂಟೆಗೆ ನಗರದ ಪುರಭವನದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಅಜಿತ್ ಕುಮಾ‌ರ್ ರೈ ಮಾಲಾಡಿ ತಿಳಿಸಿದ್ದಾರೆ.

ಬಂಟ್ಸ್‌ ಹಾಸ್ಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಹೈಕೋರ್ಟ್ ನ್ಯಾಯಮೂರ್ತಿಗಳಾದ ನ್ಯಾ. ವಿಶ್ವಜಿತ್ ಶೆಟ್ಟಿ ಸವಣೂರು ಹಾಗೂ ನ್ಯಾ. ರಾಜೇಶ್ ರೈ ಕಲ್ಲಂಗಳ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮೋಹನ್‌ದೇವ್ ಆಳ್ವ ಮತ್ತು ಡಾ. ಎಂ.ಕೆ. ಶೈಲಜಾ ಆಳ್ವ ಉಪಸ್ಥಿತರಿರಲಿದ್ದು, ಕೆ. ಅಜಿತ್ ಕುಮಾರ್ ರೈ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಪ್ರಶಸ್ತಿ ಪುರಸ್ಕೃತರ ವಿವರ
ಡಾ. ಕೊಡ್ಯಾನ್ ನಾಗಪ್ಪ ಆಳ್ವ ಹಾಗೂ ಕಲ್ಯಾಣಿ ಆಳ್ವ ಸ್ಮರಣಾರ್ಥವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಡಾ. ಸತೀಶ್ ಭಂಡಾರಿ (ವೈದ್ಯಕೀಯ), ಪ್ರೊ. ವಸಂತ್ ಶೆಟ್ಟಿ ಮುಳ್ಳಾಡ್ (ಶೈಕ್ಷಣಿಕ), ಕೆ. ಉಷಾ ಪಿ. ರೈ (ಸಾಹಿತ್ಯ), ಗುರುಕಿರಣ್ ಶೆಟ್ಟಿ (ಸಂಗೀತ), ವಿದುಷಿ ನಯನ ವಿ. ರೈ ಕುದ್ಮಾಡಿ (ನೃತ್ಯ), ಅಜಿತ್ ಕುಮಾ‌ರ್ ಶೆಟ್ಟಿ (ದೇಶ ಸೇವೆ), ಪ್ರಶಾಂತ್ ರೈ ಪುತ್ತೂರು ಹಾಗೂ ಚಿಂತನ್ ಎಸ್. ಶೆಟ್ಟಿ (ಕ್ರೀಡೆ) ಮತ್ತು ವಿವೇಕ್ ಶೆಟ್ಟಿ (ಕೈಗಾರಿಕೆ) ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಇದೇ ಸಂದರ್ಭದಲ್ಲಿ ವಿವೇಕ್ ಶೆಟ್ಟಿ ಬೊಳ್ಳಗುತ್ತು, ಪ್ರಕಾಶ್ ಭಂಡಾರಿ, ಕೆ.ಕೆ. ಶೆಟ್ಟಿ ಕುತ್ತಿಕಾರ್, ಕರುಣಾಕರ ಎಂ. ಶೆಟ್ಟಿ, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ವೇಣುಗೋಪಾಲ್ ಎಲ್. ಶೆಟ್ಟಿ, ಮುಗೋಡಿ ಸುಧಾಕರ ಶೆಟ್ಟಿ, ಡಾ. ನವೀನ್‌ಚಂದ್ರ ಶೆಟ್ಟಿ, ಡಾ. ಅಶೋಕ್ ಆಳ್ವ, ಕೆಂಚನೂರು ಸೋಮಶೇಖರ ಶೆಟ್ಟಿ, ದಿನೇಶ್ ಆಳ್ವ, ಮುರ ಸದಾಶಿವ ಶೆಟ್ಟಿ, ಡಾ. ಸರಿತಾ ಹೆಗ್ಡೆ ಹಾಗೂ ರವೀಂದ್ರನಾಥ ಮಾರ್ಲ ಅವರನ್ನು ಸನ್ಮಾನಿಸಲಾಗುವುದು. ಅಲ್ಲದೆ, ಕೊಡಿಯಾಲ್‌ ಗುತ್ತು ಭಾಸ್ಕರ್ ರೈ ಸ್ಮರಣಾರ್ಥ ಯಕ್ಷಗಾನ ಸಂಚಾಲಕ ಪಿ. ಕಿಶನ್ ಹೆಗ್ಡೆ ಅವರಿಗೆ ವಿಶೇಷ ಗೌರವ ಸಲ್ಲಿಕೆಯಾಗಲಿದೆ.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ.ಎಂ. ಶೆಟ್ಟಿ ಹಾಗೂ ಕೋಶಾಧಿಕಾರಿ ಸಿ.ಎ. ರಾಮ್ ಮೋಹನ್ ರೈ ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ