image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಏಪ್ರಿಲ್ 16 ರಿಂದ 18 ರವರೆಗೆ: ಹೊಸ ಸಂಪ್ರದಾಯಕ್ಕೆ ಮುನ್ನುಡಿ

ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ ಪದವಿ ಪ್ರದಾನ ಸಮಾರಂಭ ಏಪ್ರಿಲ್ 16 ರಿಂದ 18 ರವರೆಗೆ: ಹೊಸ ಸಂಪ್ರದಾಯಕ್ಕೆ ಮುನ್ನುಡಿ

ಮಂಗಳೂರು:ನಗರದ ಪ್ರತಿಷ್ಠಿತ ಫಾದರ್ ಮುಲ್ಲರ್ ಚಾರಿಟಬಲ್ ಸಂಸ್ಥೆಗಳ (FMCI) 2026ನೇ ಸಾಲಿನ ಪದವಿ ಪ್ರದಾನ ಸಮಾರಂಭವು ಏಪ್ರಿಲ್ 16 ರಿಂದ 18 ರವರೆಗೆ ವಿವಿಧ ಹಂತಗಳಲ್ಲಿ ನಡೆಯಲಿದ್ದು, ಈ ಬಾರಿ ಸಮಾರಂಭದಲ್ಲಿ ಸಾಂಪ್ರದಾಯಿಕ ಪದವಿ ಟೋಪಿಗಳ ಬದಲಿಗೆ ಆಯಾ ಕಾಲೇಜುಗಳನ್ನು ಪ್ರತಿನಿಧಿಸುವ ವಿಶೇಷ ವಿನ್ಯಾಸದ 'ಸ್ಯಾಶ್'ಗಳನ್ನು ಧರಿಸುವ ಮೂಲಕ ಹೊಸ ಪದ್ಧತಿಯನ್ನು ಪರಿಚಯಿಸಲಾಗುತ್ತಿದೆ ಎಂದು       ತಿಳಿಸಿದರು. ನಗರದ ಫಾದರ್ಸ್ ಮುಲ್ಲರ್ ಆಸ್ಪತ್ರೆ ಆವರಣದಲ್ಲಿರುವ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, 

ಏಪ್ರಿಲ್ 16 ರಂದು ಬೆಳಿಗ್ಗೆ 10 ಗಂಟೆಗೆ ಫಾದರ್ ಮುಲ್ಲರ್ ಹೋಮಿಯೋಪತಿ ವೈದ್ಯಕೀಯ ಕಾಲೇಜಿನ 36ನೇ ಪದವಿ ದಿನೋತ್ಸವ ನಡೆಯಲಿದ್ದು, ರಾಷ್ಟ್ರೀಯ ಹೋಮಿಯೋಪತಿ ಆಯೋಗದ ಅಧ್ಯಕ್ಷರಾದ ಡಾ. ತಾರಕೇಶ್ವರ್ ಜೈನ್ ಹಾಗೂ ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ. ಎಸ್. ಗಂಗಾಧರ ಸೋಮಯಾಜಿ ಅತಿಥಿಗಳಾಗಿ ಪಾಲ್ಗೊಂಡು 111 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಿದ್ದಾರೆ ಎಂದರು. 

ಏಪ್ರಿಲ್ 17 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಎರಡನೇ ಹಂತದ ಕಾರ್ಯಕ್ರಮದಲ್ಲಿ ವೈದ್ಯಕೀಯ, ಅಲೈಡ್ ಹೆಲ್ತ್ ಮತ್ತು ಫಿಸಿಯೋಥೆರಪಿ ಕಾಲೇಜುಗಳ 518 ವಿದ್ಯಾರ್ಥಿಗಳು ಪದವಿ ಪಡೆಯಲಿದ್ದಾರೆ.

ಈ ಸಮಾರಂಭಕ್ಕೆ ಕರ್ನಾಟಕ ಸರ್ಕಾರದ ವೈದ್ಯಕೀಯ ಶಿಕ್ಷಣ ಸಚಿವ ಶ್ರೀ ಶರಣಪ್ರಕಾಶ್ ಆರ್. ಪಾಟೀಲ್ ಹಾಗೂ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಐರಾನಿ ಮೊಹಮ್ಮದ್ ಖಾನ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದರು. 

ಅಂತಿಮ ದಿನವಾದ ಏಪ್ರಿಲ್ 18 ರಂದು ಮಧ್ಯಾಹ್ನ 3 ಗಂಟೆಗೆ ನರ್ಸಿಂಗ್ ಹಾಗೂ ಸ್ಪೀಚ್ ಅಂಡ್ ಹಿಯರಿಂಗ್ ಕಾಲೇಜಿನ ಒಟ್ಟು 117 ವಿದ್ಯಾರ್ಥಿಗಳಿಗೆ ಪದವಿ ನೀಡಲಾಗುವುದು.

ಮಾಹೆ ಮಣಿಪಾಲದ ಅಸೋಸಿಯೇಟ್ ಡೀನ್ ಡಾ. ವೆಂಕಟರಾಜ ಐತಾಳ್ ಮತ್ತು ಏಮ್ಸ್ ಭುವನೇಶ್ವರದ ಪ್ರಾಂಶುಪಾಲರಾದ ಡಾ. ಆಶಾ ಪಿ. ಶೆಟ್ಟಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರಲಿದ್ದಾರೆ. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳಿಗೆ 'ಅಧ್ಯಕ್ಷರ ಚಿನ್ನದ ಪದಕ' ಹಾಗೂ ವಿಶ್ವವಿದ್ಯಾಲಯ ಮಟ್ಟದ ರಾಂಕ್ ವಿಜೇತರಿಗೆ ವಿಶೇಷ ಗೌರವಗಳನ್ನು ಅರ್ಪಿಸಲಾಗುವುದು ಎಂದು ಮಾಹಿತಿ ನೀಡಿದರು.

Category
ಕರಾವಳಿ ತರಂಗಿಣಿ