image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಂಜಯ ನಗರದಲ್ಲಿ ರೂ. 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಸಂಜಯ ನಗರದಲ್ಲಿ ರೂ. 50 ಲಕ್ಷ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿ ಪೂಜೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 21ನೇ ಪದವು ಪಶ್ಚಿಮ ವಾರ್ಡಿನ ಸಂಜಯ ನಗರ ಪ್ರೀತಿ ಮುಗ್ರೋಡಿ ಇವರ ಮನೆಯ ಬಳಿ ರೂ. 50 ಲಕ್ಷ ವೆಚ್ಚದಲ್ಲಿ ರಸ್ತೆ ಹಾಗೂ ಅಡ್ಡರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಭೂಮಿ ಪೂಜೆ ನೆರವೇರಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, "ಈ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಸ್ಥಳೀಯರ ಬೇಡಿಕೆಗೆ ಅನುಗುಣವಾಗಿ ಈ ರಸ್ತೆ ನಿರ್ಮಾಣಕ್ಕೆ ವಿಶೇಷ ಅನುದಾನ ಮಂಜೂರುಗೊಳಿಸಲಾಗಿತ್ತು. ಆದರೆ ಈಗಿನ ಕಾಂಗ್ರೆಸ್ ಸರ್ಕಾರ ಆ ಅನುದಾನಕ್ಕೆ ತಡೆ ನೀಡಿದ್ದರಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ರಸ್ತೆ ಮತ್ತು ತಡೆಗೋಡೆ ನಿರ್ಮಾಣ ಕಾರ್ಯಕ್ಕೆ ಚಾಲನೆ ದೊರೆತಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸವಿದೆ," ಎಂದರು.

ಕಾರ್ಯಕ್ರಮದಲ್ಲಿ ನಿಕಟಪೂರ್ವ ಪಾಲಿಕೆ ಸದಸ್ಯೆ ಶ್ರೀಮತಿ ವನಿತಾ ಪ್ರಸಾದ್, ಪ್ರಸಾದ್ ಟಿ, ಬಾಬಣ್ಣ, ಯತೀಶ್, ಪ್ರೀತಿ ಪೂಜಾರಿ, ಮೋಹನ್, ಶ್ರೀಧರ್, ವಿನೋದ, ರವಿ ಶೆಟ್ಟಿ, ದಯಾನಂದ, ಜಯಂತಿ, ಗೋಪಾಲ, ನಿರ್ಮಲ, ಅಮ್ಮಿ ಸೇರಿದಂತೆ ವಾರ್ಡಿನ ಕಾರ್ಯಕರ್ತರು ಹಾಗೂ ಪರಿಸರದ ನಾಗರಿಕರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ