image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ: ಅರ್ಹತಾ ಪರೀಕ್ಷೆ ಮುಂಡೂಡಿಕೆ

ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ: ಅರ್ಹತಾ ಪರೀಕ್ಷೆ ಮುಂಡೂಡಿಕೆ

ಮಂಗಳೂರು:  ಸರ್ಕಾರಿ ಪ್ರೌಢಶಾಲಾ ಸಹಶಿಕ್ಷಕ ವೃಂದದಿಂದ ಸರ್ಕಾರಿ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ಏಪ್ರಿಲ್  21 ರಿಂದ ಏಪ್ರಿಲ್ 24 ರವರೆಗೆ ರಾಜ್ಯದ ಶೈಕ್ಷಣಿಕ ವಿಭಾಗೀಯ ಕೇಂದ್ರಗಳಲ್ಲಿ ನಡೆಸಲು ಅಧಿಸೂಚನೆಯನ್ನು ಹೊರಡಿಸಲಾಗಿತ್ತು.

 ಆದರೆ, ಪ್ರಸ್ತುತ ನಡೆಸಲಾಗುತ್ತಿರುವ 2027ರ ರಾಷ್ಟ್ರೀಯ ಜನಗಣತಿ ಕಾರ್ಯಕ್ಕೆ ಬಹುತೇಕ ಶಿಕ್ಷಕರನ್ನು ನಿಯೋಜಿಸಲಾಗಿದ್ದು, ಈ ಕರ್ತವ್ಯದಲ್ಲಿ ತೊಡಗಿರುತ್ತಾರೆ. ಆದುದರಿಂದ ಶಿಕ್ಷಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು  ಶಾಲಾ ಶಿಕ್ಷಣ ಇಲಾಖೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ