image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರಿನಂತೆ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರನ್ನು ರಾಜ್ಯದ ಎರಡನೇ ಬೆಂಗಳೂರಿನಂತೆ ಅಭಿವೃದ್ಧಿಪಡಿಸಲು ಸರ್ಕಾರ ಬದ್ಧ: ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ಮಂಗಳೂರು ನಗರವನ್ನು ರಾಜ್ಯದ ಎರಡನೇ ಬೆಂಗಳೂರು ಎಂಬಂತೆ ಸಮಗ್ರವಾಗಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಶನಿವಾರ ನಗರದ ವೆಲೆನ್ಸಿಯಾ ವೃತ್ತದ ಬಳಿ ವೆಲೆನ್ಸಿಯಾ-ನಾಗನಕಟ್ಟೆ ರಸ್ತೆ ಕಾಂಕ್ರೀಟೀಕರಣ ಸೇರಿದಂತೆ ಒಟ್ಟು ₹3.47 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಗರದ ಸೌಂದರ್ಯೀಕರಣ ಮತ್ತು ಸುಗಮ ಸಂಚಾರಕ್ಕೆ ಸುಸಜ್ಜಿತ ರಸ್ತೆಗಳು ಅಗತ್ಯವಾಗಿದ್ದು, ನಿಗದಿಪಡಿಸಿದ ಕ್ಲಪ್ತ ಸಮಯದಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು, ವೆಲೆನ್ಸಿಯಾ ಪ್ರದೇಶದ ಜನರ ಬಹುದಿನಗಳ ಬೇಡಿಕೆಯಂತೆ ಈ ಕಾಂಕ್ರೀಟ್ ರಸ್ತೆ ಯೋಜನೆ ಮಂಜೂರಾಗಿದ್ದು, ಇದರಿಂದ ಸ್ಥಳೀಯರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ತಿಳಿಸಿದರು. ಇದೇ ವೇಳೆ ವೆಲೆನ್ಸಿಯಾ ಚರ್ಚ್‌ನ ಸಹಾಯಕ ಧರ್ಮಗುರು ವಂದನೀಯ ಪ್ರದೀಪ್ ಅವರು ಶಂಕುಸ್ಥಾಪನೆಯ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೊ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮನಪಾ ಆಯುಕ್ತ ರವಿಚಂದ್ರ ನಾಯಕ್, ಮಾಜಿ ಮೇಯರ್‌ಗಳಾದ ಹರಿನಾಥ್ ಮತ್ತು ಶಶಿಧರ ಹೆಗ್ಡೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಪ್ರಮುಖರಾದ ನವೀನ್ ಡಿಸೋಜ, ಅಬ್ದುಲ್ ರವೂಫ್, ಆರ್. ಪದ್ಮರಾಜ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ