image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮರವೂರಿನಲ್ಲಿ ₹9 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಶಿಲಾನ್ಯಾಸ

ಮರವೂರಿನಲ್ಲಿ ₹9 ಕೋಟಿ ವೆಚ್ಚದ ಚತುಷ್ಪಥ ರಸ್ತೆ ಕಾಮಗಾರಿಗೆ ಸಚಿವ ದಿನೇಶ್ ಗುಂಡೂರಾವ್ ಶಿಲಾನ್ಯಾಸ

ಮಂಗಳೂರು: ಮಹಾತ್ಮ ಗಾಂಧಿ ನಗರಾಭಿವೃದ್ಧಿ ಯೋಜನೆ (ಹಂತ-2) ಮತ್ತು ಎನ್‌ಜಿಟಿ ಪರಿಹಾರ ನಿಧಿಯಡಿ ಮರವೂರು-ಮರಕಡ ವರೆಗಿನ ಚತುಷ್ಪಥ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣದ ₹9 ಕೋಟಿ ವೆಚ್ಚದ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಶನಿವಾರ ಶಂಕುಸ್ಥಾಪನೆ ನೆರವೇರಿಸಿದರು.

ಮರವೂರಿನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮಂಗಳೂರು ನಗರದ ಸಮಗ್ರ ಸುಧಾರಣೆಗಾಗಿ ಮಹಾತ್ಮ ಗಾಂಧಿ ನಗರಾಭಿವೃದ್ಧಿ ಯೋಜನೆ ಹಾಗೂ ಎನ್‌ಜಿಟಿ ಪರಿಹಾರ ನಿಧಿಯ ಮೂಲಕ ಒಟ್ಟು ₹165 ಕೋಟಿ ಮೊತ್ತದ ವಿವಿಧ ಕಾಮಗಾರಿಗಳಿಗೆ ಇಂದು ಚಾಲನೆ ನೀಡಲಾಗುತ್ತಿದೆ. ಇದರಲ್ಲಿ ಮರವೂರು ಭಾಗದ ರಸ್ತೆ ಅಭಿವೃದ್ಧಿಗೆ ₹9 ಕೋಟಿ ಮೀಸಲಿಡಲಾಗಿದ್ದು, ಗುಣಮಟ್ಟದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಮಾಜಿ ಮೇಯರ್‌ಗಳಾದ ಹರಿನಾಥ್, ಶಶಿಧರ ಹೆಗ್ಡೆ, ಕೊಂಕಣಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಅಲ್ವಾರಿಸ್, ಮಾಜಿ ಮನಪಾ ಸದಸ್ಯರಾದ ನವೀನ್ ಡಿಸೋಜ, ಅನಿಲ್, ಪ್ರವೀಣ್ ಚಂದ್ರ ಆಳ್ವ, ವಿಶ್ವಾಸ್ ದಾಸ್, ಆರ್. ಪದ್ಮರಾಜ್ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ