image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರು 39ನೇ ಫನ್ನೀರ್ ವಾರ್ಡ್ ಸೆಮಿನರಿ ವೀವ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಮಂಗಳೂರು 39ನೇ ಫನ್ನೀರ್ ವಾರ್ಡ್ ಸೆಮಿನರಿ ವೀವ್ ರಸ್ತೆ ಅಭಿವೃದ್ಧಿಗೆ ಶಾಸಕ ವೇದವ್ಯಾಸ ಕಾಮತ್ ಗುದ್ದಲಿ ಪೂಜೆ

ಮಂಗಳೂರು:  ಮಹಾನಗರ ಪಾಲಿಕೆ ವ್ಯಾಪ್ತಿಯ 39ನೇ ಫನ್ನೀರ್ ವಾರ್ಡಿನ ಸೆಮಿನರಿ ವೀವ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಈ ರಸ್ತೆ ಅಭಿವೃದ್ಧಿ ಯೋಜನೆಯು ಒಟ್ಟು 65 ಲಕ್ಷ ರೂಪಾಯಿವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿದೆ.

ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗಾಗಿ 'ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ-1' ಅಡಿಯಲ್ಲಿ ನೂರಕ್ಕೂ ಹೆಚ್ಚು ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿತ್ತು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಗಳೂರಿನ ಅಭಿವೃದ್ಧಿಗೆ ಮೀಸಲಿಟ್ಟಿದ್ದ ಈ ಅನುದಾನಕ್ಕೆ ತಡೆ ನೀಡಲಾಗಿತ್ತು,ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ಅವರು, "ನಮ್ಮ ಸತತ ಪ್ರಯತ್ನ ಮತ್ತು ಹೋರಾಟದ ಫಲವಾಗಿ, ತಡೆಹಿಡಿಯಲಾಗಿದ್ದ ಅನುದಾನವನ್ನು ರಾಜ್ಯ ಸರ್ಕಾರವು ಇದೀಗ 'ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ-2' ಹೆಸರಿನಲ್ಲಿ ಮತ್ತೆ ಬಿಡುಗಡೆ ಮಾಡಿದೆ. ಇದರಿಂದಾಗಿ ಸ್ಥಗಿತಗೊಂಡಿದ್ದ ನಗರದ ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಮರುಜೀವ ಬಂದಿದೆ," ಎಂದರು.

ಈ ಸಂದರ್ಭದಲ್ಲಿ ಪ್ರಮುಖರಾದ ಅಜಿತ್ ಡಿಸಿಲ್ವ, ರಮೇಶ್ ಹೆಗ್ಡೆ, ಭರತ್ ಕುಮಾರ್, ಸಂದೀಪ್ ಗರೋಡಿ, ರಾಮ್ ಪ್ರಸಾದ್, ಪ್ರವೀಣ್ ನಿಡ್ಡೇಲ್, ನವೀನ್ ಶೆಣೈ, ಗಣೇಶ್, ರೋಹಿದಾಸ್, ರತನ್ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ