image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ, ಉದ್ಯಮಿ ಮಮ್ರಾಜ್ ಅಲಿ ನಿಗೂಢ ನಾಪತ್ತೆ..! ಕೂಳೂರು ಸೇತುವೆ ಬಳಿ ಸ್ಥಿತಿಯಲ್ಲಿ BMW ಕಾರು ಪತ್ತೆ

ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ, ಉದ್ಯಮಿ ಮಮ್ರಾಜ್ ಅಲಿ ನಿಗೂಢ ನಾಪತ್ತೆ..! ಕೂಳೂರು ಸೇತುವೆ ಬಳಿ ಸ್ಥಿತಿಯಲ್ಲಿ BMW ಕಾರು ಪತ್ತೆ

ಮಂಗಳೂರು : ಮಂಗಳೂರು ಉತ್ತರ ಕ್ಷೇತ್ರದ ಮಾಜಿ ಶಾಸಕ ಮೊಯಿದ್ದೀನ್ ಬಾವ  ಸಹೋದರ ಮುಲ್ತಾಜ್ ಆಲಿ(52) ಇಂದು ನಸುಕಿನ ಜಾವ ನಿಗೂಢವಾಗಿ ನಾಪತ್ತೆಯಾಗಿರು ಘಟನೆ ಮಂಗಳೂರಿನಲ್ಲಿ ನಡೆದಿದೆ.

ಬೆಳಗ್ಗೆ ಮೂರು ಗಂಟೆ ಸುಮಾರಿಗೆ ಇದ್ದಕ್ಕಿದ್ದಂತೆ ಮನೆಯಿಂದ ಹೊರಟ್ಟಿದ್ದ ಅವರು ಬಳಿಕ ಮನೆಯವರ ಸಂಪರ್ಕಕ್ಕೆ ಸಿಗದೆ ಕಣ್ಮರೆಯಾಗಿದ್ದರು. ಅವರ ಕಾರು ಬೆಳಗ್ಗೆ 5 ಗಂಟೆ ಸುಮಾರಿಗೆ ಮಂಗಳೂರಿನ ಕುಳೂರಿನ ಸೇತುವೆ ಬಳಿ ಹಾನಿಯಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕಾರು ಸೇತುವೆ ಬಳಿ ಪತ್ತೆಯಾದ ಹಿನ್ನಲೆಯಲ್ಲಿ. ಅವರು ನೀರಿಗೆ ಹಾರಿರಬಹುದು ಅಥಾವ ಯಾರದರೂ ಎಸೆದಿರಬಹುದು ಎಂಬ ಶಂಕೆಯಲ್ಲಿ ನದಿಯಲ್ಲಿ ಎಸ್ ಡಿ ಆರ್ ಎಫ್.ಎನ್ ಡಿ ಆ‌ರ್ ಎಫ್,ಅಗ್ನಿಶಾಮಕದಳದ ತಂಡದವರು ಶೋಧ ಕಾರ್ಯ ನಡೆಸುತ್ತಿದೆ.

ಕಾರು ಪತ್ತೆಯಾದ ಸ್ಥಳಕ್ಕೆ ಮಾಜಿ ಶಾಸಕ ಮೊಯಿದ್ದೀನ್ ಬಾವ ಸೇರಿದಂತೆ ಕುಟುಂಬಸ್ಥರು ಭೇಟಿ ನೀಡಿದ್ದು, ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್‌ ಕಮೀಷನ‌ರ್ ಅನುಪಮ್ ಅಗರ್ವಾಲ್ ಆಗಮಿಸಿ ಪರಿಶೀಲನೆ ನಡೆಸಿ ನಂತರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಮುಮ್ರಾಜ್ ಅವರು ಮುಂಜಾನೆ ಮೂರು ಗಂಟೆಗೆ ಮನೆಯಿಂದ ಬಿಎಂಡಬ್ಲೂ ಕಾರ್ ಚಲಾಯಿಸಿಕೊಂಡು ಬಂದಿದ್ರು. ಕುಳೂರು ಸೇತುವೆಯಲ್ಲಿ ಕಾರು ಅಫಘಾತವಾಗಿ ಕಾಣೆಯಾಗಿದ್ದಾರೆ.

ಈ ವಿಚಾರ ಮಗಳಿಗೆ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿಸಿದ್ದಾರೆ. ಮುಲ್ತಾಜ್ ಸೇತುವೆಯಿಂದ ಕೆಳಗೆ ಹಾರಿರುವ ಬಗ್ಗೆ ಸಂಶಯ ಇದೆ. ಹೀಗಾಗಿ ವಿವಿಧ ತಂಡಗಳು ನದಿಯಲ್ಲಿ ಶೋಧ ಕಾರ್ಯ ಮಾಡುತ್ತಿದ್ದಾರೆ. ಎಫ್ ಎಸ್ ಎಲ್‌ ಅಧಿಕಾರಿಗಳು ಕಾರು ಪರಿಶೀಲನೆ ಮಾಡಿದ್ದಾರೆ.

ಕುಟುಂಬದ ಸದಸ್ಯರಿಂದಲೂ ಕೆಲವೊಂದು ಮಾಹಿತಿಗಳನ್ನು ಸಂಗ್ರಹಿಸಿದ್ದೇವೆ. ಘಟನೆಯ ಬಗ್ಗೆ ತನಿಖೆಯನ್ನು ಮಾಡುತ್ತಿದ್ದೇವೆ ಎಂದು ಪೊಲೀಸ್‌ ಕಮೀಷನ‌ರ್ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ