image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಳೆಗಾಲದ ಮುನ್ನೆಚ್ಚರಿಕೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮಳೆಗಾಲದ ಮುನ್ನೆಚ್ಚರಿಕೆ: ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮಂಗಳೂರು: ಮುಂಬರಲಿರುವ ಮಳೆಗಾಲದಲ್ಲಿ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಅಥವಾ ಅವಘಡಗಳು ಸಂಭವಿಸದಂತೆ ಸಕಲ ಸಿದ್ಧತೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಇಂದು ಪೂರ್ವಭಾವಿ ಸಭೆ ನಡೆಯಿತು.

ಕಳೆದ ಮಳೆಗಾಲದಲ್ಲಿ ನಗರದ ವಿವಿಧೆಡೆ ಉಂಟಾದ ಅಪಾರ ಪ್ರಮಾಣದ ಹಾನಿಯನ್ನು ಗಂಭೀರವಾಗಿ ಪರಿಗಣಿಸಿದ ಶಾಸಕರು, ನೆರೆ ಪರಿಸ್ಥಿತಿಗೆ ಕಾರಣವಾಗುವ ಅಂಶಗಳನ್ನು ಗುರುತಿಸಿ ಅವುಗಳನ್ನು ತಡೆಗಟ್ಟಲು ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು. ರಾಜಕಾಲುವೆಗಳಲ್ಲಿ ಮಳೆನೀರು ಸರಾಗವಾಗಿ ಹರಿದು ಹೋಗುವಂತೆ ಹೂಳೆತ್ತುವ ಕಾರ್ಯವನ್ನು ಚುರುಕುಗೊಳಿಸಬೇಕು ಹಾಗೂ ಪಂಪ್ ವೆಲ್ ಮತ್ತು ಪಡೀಲ್ ರೈಲ್ವೆ ಅಂಡರ್ ಪಾಸ್ ಬಳಿ ನೀರು ಶೇಖರಣೆಯಾಗದಂತೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ತಿಳಿಸಿದರು.

ಅಲ್ಲದೆ, ನಗರದ ಸಂಭಾವ್ಯ ಗುಡ್ಡಕುಸಿತದ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡುವುದರ ಜೊತೆಗೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸಭೆಯಲ್ಲಿ ಪಾಲಿಕೆ ಆಯುಕ್ತರಾದ ರವಿಚಂದ್ರ ನಾಯಕ್, ತಹಶೀಲ್ದಾರ್ ರಮೇಶ್ ಬಾಬು ಸೇರಿದಂತೆ ಮೆಸ್ಕಾಂ, ಅರಣ್ಯ, ಕಂದಾಯ ಮತ್ತು ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದು, ಮಳೆಗಾಲದ ಸಿದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡರು.

Category
ಕರಾವಳಿ ತರಂಗಿಣಿ