image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರು ಪಾಲು: ಶೋಧ ಕಾರ್ಯಕ್ಕೆ ಧಾವಿಸಿದ ಈಶ್ವರ್ ಮಲ್ಪೆ ತಂಡ

ನದಿಯಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರು ಪಾಲು: ಶೋಧ ಕಾರ್ಯಕ್ಕೆ ಧಾವಿಸಿದ ಈಶ್ವರ್ ಮಲ್ಪೆ ತಂಡ

ಕಡಬ: ಸ್ನಾನಕ್ಕೆಂದು ನದಿಗೆ ಇಳಿದ ಯುವಕನೊಬ್ಬ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿರುವ ದಾರುಣ ಘಟನೆ ಸೋಮವಾರ ಸಂಜೆ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಿಯರ್ ಎಂಬಲ್ಲಿ ನಡೆದಿದೆ. ಮರ್ದಾಳ ನಿವಾಸಿ ಮಂಜು ಎಂಬವರ ಪುತ್ರ ರಕ್ಷಿತ್ (26) ನಾಪತ್ತೆಯಾದ ದುರ್ದೈವಿ.

ಈಶ್ವರ್ ಮಲ್ಪೆ ವಿಡಿಯೋಗಾಗಿ ಇಲ್ಲಿ ಕ್ಲಿಕ್ ಮಾಡಿ

ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ ರಕ್ಷಿತ್, ಸೋಮವಾರ ಸಂಜೆ ತನ್ನ ಸ್ನೇಹಿತರೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಪ್ರದೇಶಕ್ಕೆ ಸ್ನಾನಕ್ಕಾಗಿ ತೆರಳಿದ್ದರು. ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತಕ್ಕೆ ಸಿಲುಕಿ ಅವರು ದಿಢೀರ್ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆಯೇ ಕಡಬ ಪೊಲೀಸರು ಹಾಗೂ ಪುತ್ತೂರಿನ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಆದರೆ, ಘಟನಾ ಸ್ಥಳವು ದುರ್ಗಮ ಹಾದಿಯಿಂದ ಕೂಡಿದ್ದರಿಂದ ಅಗ್ನಿಶಾಮಕ ವಾಹನಕ್ಕೆ ತಲುಪಲು ಸಾಧ್ಯವಾಗದೆ, ಸಿಬ್ಬಂದಿಗಳು ನಡೆದುಕೊಂಡೇ ಹೋಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಸದ್ಯ ಕತ್ತಲಾಗಿರುವುದರಿಂದ ಕಾರ್ಯಾಚರಣೆಗೆ ತೀವ್ರ ಅಡಚಣೆ ಉಂಟಾಗಿದ್ದು, ನಾಪತ್ತೆಯಾದ ಯುವಕನ ಪತ್ತೆಗಾಗಿ ಪ್ರಸಿದ್ಧ ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡ ಸ್ಥಳಕ್ಕೆ ಆಗಮಿಸುತ್ತಿದೆ. ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದು, ಯುವಕನ ಪತ್ತೆಗಾಗಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಆತಂಕದಿಂದ ಕಾಯುತ್ತಿದ್ದಾರೆ.

Category
ಕರಾವಳಿ ತರಂಗಿಣಿ