image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಬಿಪಿಎಲ್ ಕಾರ್ಡ್ ಹೊಂದಿರುವ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್‌ನಿಂದ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಬಿಪಿಎಲ್ ಕಾರ್ಡ್ ಹೊಂದಿರುವ ಅತ್ಯಂತ ಬಡತನದ ಹಿನ್ನೆಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿವೇತನವನ್ನು ಘೋಷಿಸಲಾಗಿದೆ. 2026ರ ಸಾಲಿನ ಎಸ್.ಎಸ್.ಎಲ್.ಸಿ (SSLC) ಮತ್ತು ದ್ವಿತೀಯ ಪಿಯುಸಿ (2nd PUC) ಪರೀಕ್ಷೆಯಲ್ಲಿ ಶೇಕಡಾ 90ಕ್ಕಿಂತ ಅಧಿಕ ಅಂಕ ಗಳಿಸಿದ ಅರ್ಹ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.

ಮೇ 30, ಶನಿವಾರದಂದು ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ಅದ್ದೂರಿಯಾಗಿ ನಡೆಯಲಿರುವ "ಪಟ್ಲ ಸಂಭ್ರಮ 2026" ಕಾರ್ಯಕ್ರಮದಲ್ಲಿ ಈ ವಿದ್ಯಾರ್ಥಿವೇತನವನ್ನು ವಿತರಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ತಮ್ಮ ಇತ್ತೀಚಿನ ಭಾವಚಿತ್ರ, ಬಿಪಿಎಲ್ ಕಾರ್ಡ್‌ನ ಪ್ರತಿ ಹಾಗೂ ಅಂಕಪಟ್ಟಿಯೊಂದಿಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಅರ್ಜಿ ಸಲ್ಲಿಸಲು ದಿನಾಂಕ 15-05-2026 ಕೊನೆಯ ದಿನವಾಗಿದ್ದು, ಆಯ್ಕೆಯಾದ ವಿದ್ಯಾರ್ಥಿಗಳು ಮೇ 30ರಂದು ನಡೆಯುವ ಸಮಾರಂಭದಲ್ಲಿ ಬೆಳಿಗ್ಗೆ 9 ಗಂಟೆಗೆ ಕಡ್ಡಾಯವಾಗಿ ಹಾಜರಿರಬೇಕು. ವಿದ್ಯಾರ್ಥಿಗಳು ಖುದ್ದಾಗಿ ಹಾಜರಿಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಮಾನ್ಯ ಮಾಡಲಾಗುವುದಿಲ್ಲ ಎಂದು ಫೌಂಡೇಶನ್ ತಿಳಿಸಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ:
ಸಿಎ ಸುದೇಶ್ ಕುಮಾರ್ ರೈ,
ಶಾಪ್ ನಂ. 16 ಮತ್ತು 17, 2ನೇ ಮಹಡಿ,
ಎಂಪೈರ್ ಮಾಲ್, ಎಂ.ಜಿ. ರಸ್ತೆ,
ಮಂಗಳೂರು - 575003. ಸಂಪರ್ಕ ಸಂಖ್ಯೆ: 9448623375

Category
ಕರಾವಳಿ ತರಂಗಿಣಿ