image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಪಶ್ಚಿಮ ಬಂಗಾಳದ ಜಯ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಪಶ್ಚಿಮ ಬಂಗಾಳದ ಜಯ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯ: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಪಂಚರಾಜ್ಯ ಚುನಾವಣಾ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು, ಪಶ್ಚಿಮ ಬಂಗಾಳದ ಐತಿಹಾಸಿಕ ಗೆಲುವು ಬಿಜೆಪಿಯ ಸೈದ್ಧಾಂತಿಕ ನಿಲುವು ಮತ್ತು ಪ್ರಧಾನಿ ನರೇಂದ್ರ ಮೋದಿಯವರ ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ಸಂದ ಜಯವಾಗಿದೆ ಎಂದು ಬಣ್ಣಿಸಿದ್ದಾರೆ. ಅಸ್ಸಾಂನಲ್ಲಿ ಬಿಜೆಪಿ ಹ್ಯಾಟ್ರಿಕ್ ಗೆಲುವು ಸಾಧಿಸಿರುವುದು, ಪುದುಚೇರಿಯಲ್ಲಿ ಎನ್‌ಡಿಎ ಮೈತ್ರಿಕೂಟ ಸ್ಪಷ್ಟ ಬಹುಮತ ಪಡೆದಿರುವುದು ಹಾಗೂ ಕೇರಳದಲ್ಲಿ ಪಕ್ಷದ ಉತ್ತಮ ಸಾಧನೆಯು ಮೋದಿ ಸರ್ಕಾರದ ಮೇಲಿರುವ ಜನರ ಅಚಲ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಪಶ್ಚಿಮ ಬಂಗಾಳದ ಯಶಸ್ಸಿನ ಬಗ್ಗೆ ವಿಶೇಷವಾಗಿ ಪ್ರಸ್ತಾಪಿಸಿದ ಅವರು, ತೃಣಮೂಲ ಕಾಂಗ್ರೆಸ್‌ನ ದಬ್ಬಾಳಿಕೆಯ ನಡುವೆಯೂ ಕಮಲವನ್ನು ಅರಳಿಸುವುದು ಸುಲಭದ ಮಾತಾಗಿರಲಿಲ್ಲ. ಈ ಗೆಲುವಿನ ಹಿಂದೆ ನೂರಾರು ಬಿಜೆಪಿ ಕಾರ್ಯಕರ್ತರ ತ್ಯಾಗ, ಬಲಿದಾನ ಹಾಗೂ ದೌರ್ಜನ್ಯಗಳ ವಿರುದ್ಧದ ಕಠಿಣ ಹೋರಾಟ ಅಡಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಚಾಣಾಕ್ಷ ಕಾರ್ಯತಂತ್ರ ಹಾಗೂ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರ ಸಂಘಟನಾ ಶಕ್ತಿಯು ಈ ಐತಿಹಾಸಿಕ ವಿಜಯಕ್ಕೆ ಭದ್ರ ಬುನಾದಿ ಹಾಕಿಕೊಟ್ಟಿದೆ. ಈ ಫಲಿತಾಂಶವು ಎನ್‌ಡಿಎ ಮೈತ್ರಿಕೂಟದ ಪಾರದರ್ಶಕ ಆಡಳಿತಕ್ಕೆ ಸಿಕ್ಕ ಮನ್ನಣೆಯಾಗಿದ್ದು, ಜನಾದೇಶ ನೀಡಿದ ಮತದಾರರಿಗೆ ಹಾಗೂ ಶ್ರಮಿಸಿದ ಕಾರ್ಯಕರ್ತರಿಗೆ ಚೌಟ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ