image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಒಗ್ಗಟ್ಟಿಗೆ ಶಶಿರಾಜ್ ಶೆಟ್ಟಿ ಕೊಳಂಬೆ ಕರೆ

ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಒಗ್ಗಟ್ಟಿಗೆ ಶಶಿರಾಜ್ ಶೆಟ್ಟಿ ಕೊಳಂಬೆ ಕರೆ

ಮಂಗಳೂರು : ​ರಾಜ್ಯದ ಉಪ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ಹಿನ್ನೆಡೆಯ ಕುರಿತು ತೀವ್ರ ಚಿಂತನೆ ವ್ಯಕ್ತಪಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾದ ಶಶಿರಾಜ್ ಶೆಟ್ಟಿ ಕೊಳಂಬೆ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತಳಮಟ್ಟದಿಂದ ಹೋರಾಟ ನಡೆಸಲು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರ ಏಕತೆ ಅತ್ಯಗತ್ಯ ಎಂದು ಪ್ರತಿಪಾದಿಸಿದ್ದಾರೆ. ಇತ್ತೀಚಿನ ರಾಜಕೀಯ ಬೆಳವಣಿಗೆಗಳು ಜನಾಭಿಪ್ರಾಯದಲ್ಲಿನ ಬದಲಾವಣೆಯನ್ನು ಸೂಚಿಸುತ್ತಿದ್ದು, ಮೈತ್ರಿ ಪಕ್ಷಗಳ ಕಾರ್ಯಕರ್ತರು ಈ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ಜನರ ಸಮಸ್ಯೆಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಸಂಘಟನೆಯನ್ನು ಬಲಪಡಿಸುವುದು ಮತ್ತು ಮೈತ್ರಿ ಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಸಾಧಿಸುವುದು ಇಂದಿನ ಸವಾಲುಗಳನ್ನು ಎದುರಿಸಲು ಅನಿವಾರ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.  

​ಕಾಂಗ್ರೆಸ್ ಸರ್ಕಾರವು ತನ್ನ ಅಧಿಕಾರ ಮತ್ತು ಹಣ ಬಲದ ಮೂಲಕ ಈ ಚುನಾವಣೆಯಲ್ಲಿ ಗೆಲುವು ಸಾಧಿಸಿದೆ ಎಂದು ಆರೋಪಿಸಿರುವ ಅವರು, ಕೇವಲ ಟೀಕೆಗಳಿಗೆ ಸೀಮಿತವಾಗದೆ ಜನಪರ ಕಾರ್ಯಕ್ರಮಗಳ ಮೂಲಕ ಜನರ ನಂಬಿಕೆ ಗಳಿಸಲು ಜಂಟಿ ಹೋರಾಟ ರೂಪಿಸಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ. ಸ್ಥಳೀಯ ಸಮಸ್ಯೆಗಳ ಪರಿಹಾರಕ್ಕೆ ಉಭಯ ಪಕ್ಷಗಳ ಕಾರ್ಯಕರ್ತರು ಪರಸ್ಪರ ಸಹಕಾರದೊಂದಿಗೆ ಕೆಲಸ ಮಾಡಿದರೆ ಮಾತ್ರ ಬಲಿಷ್ಠ ಪರ್ಯಾಯ ಶಕ್ತಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಅವರು ಒತ್ತಿ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪಂಚರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ಯಶಸ್ಸನ್ನು ಶ್ಲಾಘಿಸಿರುವ ಅವರು, ಅಭಿವೃದ್ಧಿ ಮತ್ತು ಸ್ಥಿರ ಆಡಳಿತಕ್ಕೆ ಜನತೆ ಬೆಂಬಲ ನೀಡುತ್ತಿರುವುದು ಇದರಿಂದ ಸ್ಪಷ್ಟವಾಗಿದ್ದು, ಮುಂದಿನ ದಿನಗಳಲ್ಲಿ ಮೈತ್ರಿ ಪಕ್ಷಗಳು ಉತ್ತಮ ಫಲಿತಾಂಶ ಸಾಧಿಸಲಿವೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Category
ಕರಾವಳಿ ತರಂಗಿಣಿ