image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಬಂಟರ ಯಾನೆ ನಾಡವರ ಮಾತೃ ಸಂಘ: 2026-29ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಬಂಟರ ಯಾನೆ ನಾಡವರ ಮಾತೃ ಸಂಘ: 2026-29ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026-29ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಸಂಘದ ಪ್ರಮುಖ ಪದಾಧಿಕಾರಿಗಳಾಗಿ ಕಾವು ಹೇಮನಾಥ ಶೆಟ್ಟಿ (ಉಪಾಧ್ಯಕ್ಷರು), ಎಮ್. ಕರುಣಾಕರ ಶೆಟ್ಟಿ (ಪ್ರಧಾನ ಕಾರ್ಯದರ್ಶಿ), ಸಿಎ ರಾಮ್ ಮೋಹನ್ ರೈ (ಕೋಶಾಧಿಕಾರಿ) ಹಾಗೂ ಪುಂಚಮೆ ಪದ್ಮನಾಭ ಶೆಟ್ಟಿ (ಜೊತೆ ಕಾರ್ಯದರ್ಶಿ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಅಧ್ಯಕ್ಷರು ಸೇರಿದಂತೆ ಒಟ್ಟು 83 ಸದಸ್ಯರನ್ನೊಳಗೊಂಡ ಬೃಹತ್ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗವು ಅಧಿಕೃತವಾಗಿ ಪ್ರಕಟಿಸಿದೆ.
ಮುಖ್ಯ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ವಕೀಲ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ಉಪ ಚುನಾವಣಾಧಿಕಾರಿ, ವಕೀಲ ನವೀನ್ ಕುಮಾರ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಪಿ. ಸದಾಶಿವ ಶೆಟ್ಟಿ ಉಪಸ್ಥಿತರಿದ್ದರು. ಸಂಘದ ಇತಿಹಾಸದಲ್ಲಿ ಒಮ್ಮತದ ಆಯ್ಕೆಯ ಮೂಲಕ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸಲಾಗಿದೆ.

Category
ಕರಾವಳಿ ತರಂಗಿಣಿ