image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಂಗಳೂರು: 2026ನೇ ಸಾಲಿನ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಪರೀಕ್ಷೆಗಳಲ್ಲಿ ಶೇ.90ಕ್ಕೂ ಅಧಿಕ ಅಂಕ ಗಳಿಸಿದ ರಾಜ್ಯ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲು ಉದ್ದೇಶಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು https://powermedia.info ಲಿಂಕ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಮೇ 25 ಕೊನೆಯ ದಿನಾಂಕವಾಗಿದೆ.

​ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು 2026ರ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲೇ ತೇರ್ಗಡೆಯಾಗಿರಬೇಕು ಹಾಗೂ ಅವರ ತಂದೆ ಅಥವಾ ತಾಯಿ ರಾಜ್ಯ ಸರ್ಕಾರದ ಯಾವುದಾದರೊಂದು ಇಲಾಖೆಯಲ್ಲಿ ಖಾಯಂ ನೌಕರರಾಗಿ ಸೇವೆ ಸಲ್ಲಿಸುತ್ತಿರಬೇಕು. ಆದರೆ, ನಿಗಮ, ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾನಿಲಯಗಳು ಹಾಗೂ ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಮಕ್ಕಳಿಗೆ ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

​ಅರ್ಜಿ ಸಲ್ಲಿಸುವಾಗ ಇಲಾಖೆಯ ಸೇವಾ ದೃಢೀಕರಣ ಪತ್ರ, ವಿದ್ಯಾರ್ಥಿಯ ಪಾಸ್‌ಪೋರ್ಟ್ ಭಾವಚಿತ್ರ, ದೃಢೀಕೃತ ಅಂಕಪಟ್ಟಿ ಹಾಗೂ ಸಂಘದ ಜಿಲ್ಲಾ ಅಥವಾ ತಾಲ್ಲೂಕು ಶಾಖೆಯ ಅಧ್ಯಕ್ಷರಿಂದ ಪಡೆದ ದೃಢೀಕರಣ ಪತ್ರವನ್ನು ಜೆ.ಪಿ.ಜಿ ಫಾರ್ಮೇಟ್‌ನಲ್ಲಿ (1 ಎಂಬಿ ಮೀರದಂತೆ) ಅಪ್‌ಲೋಡ್ ಮಾಡಬೇಕಾಗುತ್ತದೆ. ಅರ್ಜಿ ಸಲ್ಲಿಕೆಯ ವಿಧಾನದ ಕುರಿತು ಹೆಚ್ಚಿನ ಮಾಹಿತಿಗಾಗಿ 'ಕೆ.ಎಸ್.ಜಿ.ಇ.ಎ ನ್ಯೂಸ್' ಯೂಟ್ಯೂಬ್ ಚಾನಲ್ ಅಥವಾ ಬ್ಲಾಗ್ ಅನ್ನು ಸಂಪರ್ಕಿಸಬಹುದು. ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ನಂತರ ಅಭ್ಯರ್ಥಿಗಳ ನೋಂದಾಯಿತ ಇ-ಮೇಲ್‌ಗೆ ಸ್ವೀಕೃತಿ ಪತ್ರ ರವಾನೆಯಾಗಲಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Category
ಕರಾವಳಿ ತರಂಗಿಣಿ