ಪುತ್ತೂರು: ತಾಲ್ಲೂಕಿನ ಇರ್ದೆ ಗ್ರಾಮದ ಬೆಂದ್ರುತೀರ್ಥ ಸಮೀಪವಿರುವ ಐತಿಹಾಸಿಕ ಪ್ರಸಿದ್ಧ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರ ಬೈಲಾಡಿ ಹಾಗೂ ಪೂಮಾಣಿ-ಕಿನ್ನಿಮಾಣಿ ರಾಜನ್ ದೈವಗಳ ಕಡಿಕೆ ಚಾವಡಿಯಲ್ಲಿ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ಶ್ರೀ ದೇವರ ಬಾಲಾಲಯ ಪ್ರತಿಷ್ಠಾಪನಾ ಕಾರ್ಯಕ್ರಮವು ಅತ್ಯಂತ ಸಡಗರ ಸಂಭ್ರಮದಿಂದ ನಡೆಯಲಿದೆ.
ಮೇ 25, 2026 ರ ಸೋಮವಾರದಂದು ಬೆಳಿಗ್ಗೆ 7-32 ರ ಮೀನ ಲಗ್ನದ ಶುಭ ಮುಹೂರ್ತದಲ್ಲಿ ಈ ಧಾರ್ಮಿಕ ವಿಧಿವಿಧಾನಗಳು ನೆರವೇರಲಿವೆ. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ದಿವ್ಯ ಮಾರ್ಗದರ್ಶನದಲ್ಲಿ ಈ ಅನುಜ್ಞಾ ಕಲಶ ಹಾಗೂ ಶ್ರೀ ದೇವರ ಬಾಲಾಲಯ ಪ್ರತಿಷ್ಠೆ ನಡೆಯಲಿದ್ದು, ಈ ಸುಸಂದರ್ಭದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಜೀರ್ಣೋದ್ಧಾರ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿಯು ವಿನಂತಿಸಿದೆ.
ಈ ಕಾರ್ಯಕ್ರಮದ ಯಶಸ್ಸಿಗಾಗಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಶ್ರೀ ಶುಭಕರ ರೈ ಬಾಲ್ಯೊಟ್ಟುಗುತ್ತು ಹಾಗೂ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ವಿಠಲ ರೈ ಬಾಲ್ಯೊಟ್ಟುಗುತ್ತು ಅವರ ನೇತೃತ್ವದಲ್ಲಿ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.