image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ನೀಟ್ ಪರೀಕ್ಷಾ ಅವ್ಯವಸ್ಥೆ : ಕೀರ್ತನ್ ಗೌಡ ಕೊಡಪಾಲ ಆಕ್ರೋಶ

ನೀಟ್ ಪರೀಕ್ಷಾ ಅವ್ಯವಸ್ಥೆ : ಕೀರ್ತನ್ ಗೌಡ ಕೊಡಪಾಲ ಆಕ್ರೋಶ

ಮಂಗಳೂರು: ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಆಗದ ರೀತಿಯಲ್ಲಿ ನಡೆಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ನೇಮಕಾತಿ ಭ್ರಷ್ಟಾಚಾರ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಅನೇಕ ಹಗರಣಗಳು ನಿರಂತರವಾಗಿ ನಡೆಯುತ್ತಿವೆ. ಇದರ ಪರಿಣಾಮವಾಗಿ ಲಕ್ಷಾಂತರ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯುವ ಅನಿವಾರ್ಯ ಪರಿಸ್ಥಿತಿಗೆ ತಳ್ಳಲ್ಪಟ್ಟಿದ್ದಾರೆ ಎಂದು ಕಿಡಿಕಾರಿದ್ದಾರೆ.

2017ರಿಂದ 2024ರವರೆಗೆ ದೇಶದ 15ಕ್ಕೂ ಹೆಚ್ಚು ರಾಜ್ಯಗಳಲ್ಲಿ 70ಕ್ಕೂ ಹೆಚ್ಚು ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಇದು ಕೇಂದ್ರ ಎನ್‌ಡಿಎ ಸರ್ಕಾರದ ವೈಫಲ್ಯಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಕನಸು, ಪರಿಶ್ರಮ ಮತ್ತು ಭವಿಷ್ಯದೊಂದಿಗೆ ಆಟವಾಡುತ್ತಿರುವ ಕೇಂದ್ರ ಸರ್ಕಾರ ಯುವಜನತೆಗೆ ನ್ಯಾಯ ಒದಗಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಪರೀಕ್ಷಾ ವ್ಯವಸ್ಥೆಯ ಮೇಲಿನ ನಂಬಿಕೆಯನ್ನು ಉಳಿಸಬೇಕಾದರೆ ಪಾರದರ್ಶಕತೆ, ಜವಾಬ್ದಾರಿತನ ಹಾಗೂ ಕಟ್ಟುನಿಟ್ಟಿನ ಕ್ರಮಗಳು ಅತ್ಯಗತ್ಯವಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸಮರ್ಪಕವಾಗಿ ಹಾಗೂ ಭದ್ರತೆಯಿಂದ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದಿದ್ದರೆ, ರಾಜ್ಯ ಸರ್ಕಾರಗಳಿಗೆ ಆ ಜವಾಬ್ದಾರಿಯನ್ನು ವಹಿಸಬೇಕು ಎಂದು ಕೀರ್ತನ್ ಗೌಡ ಕೊಡಪಾಲ ಅವರು ಆಗ್ರಹಿಸಿದ್ದಾರೆ.

Category
ಕರಾವಳಿ ತರಂಗಿಣಿ