image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ

ಮಂಗಳೂರು : ​ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ತಮ್ಮ ಅಧಿಕೃತ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ತಮ್ಮ ಭಾಗದ ಮೂಲಸೌಕರ್ಯ, ನಾಗರಿಕ ಸಮಸ್ಯೆಗಳು, ವಿವಿಧ ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಜನಸಾಮಾನ್ಯರ ಅಹವಾಲುಗಳನ್ನು ಅತ್ಯಂತ ತಾಳ್ಮೆಯಿಂದ ಆಲಿಸಿದ ಸಂಸದರು, ಸ್ಥಳದಲ್ಲಿಯೇ ಸಂಬಂಧಪಟ್ಟ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಸಮಸ್ಯೆಗಳ ನಿವಾರಣೆಗೆ ತಕ್ಷಣವೇ ಸೂಕ್ತ ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

​ಇದೇ ವೇಳೆ ಜಿಲ್ಲೆಯ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಹಲವಾರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎದುರಾಗಿರುವ ಅಡೆತಡೆಗಳು ಮತ್ತು ಸಾರ್ವಜನಿಕ ಬೇಡಿಕೆಗಳ ಬಗ್ಗೆಯೂ ಸಾರ್ವಜನಿಕರು ಸಂಸದರ ಗಮನ ಸೆಳೆದರು. ಜನರ ಎಲ್ಲಾ ಅಹವಾಲುಗಳಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು, ಕ್ಷೇತ್ರದ ಅಭಿವೃದ್ಧಿ ಮತ್ತು ಸಾರ್ವಜನಿಕರ ಸಮಸ್ಯೆಗಳ ಪರಿಹಾರಕ್ಕೆ ತಾವು ಸದಾ ಬದ್ಧರಾಗಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Category
ಕರಾವಳಿ ತರಂಗಿಣಿ