image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಕಟ್ಟಡ ದುರಸ್ತಿಗೆ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ: ಕಟ್ಟಡ ದುರಸ್ತಿಗೆ ಸಚಿವ ಸತೀಶ್ ಜಾರಕಿಹೊಳಿ ಭರವಸೆ

ಮಂಗಳೂರು : ​ಮಂಗಳೂರಿನಲ್ಲಿ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸಲು ಜಿಲ್ಲಾಧಿಕಾರಿಯವರ ಹಳೇ ಕಟ್ಟಡವನ್ನು ಗುರುತಿಸಲಾಗಿದ್ದು, ಈ ಕಟ್ಟಡದ ದುರಸ್ತಿ ಕಾರ್ಯಕ್ಕೆ ಜಿಲ್ಲಾಧಿಕಾರಿಯವರು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಿದ್ದಾರೆ. ಈ ಸಂಬಂಧ ಹೈಕೋರ್ಟ್ ಸಂಚಾರಿ ಪೀಠದ ಸಂಚಾಲಕರು ಹಾಗೂ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿʼಸೋಜಾರವರು ಇಂದು ಮಾನ್ಯ ಲೋಕೋಪಯೋಗಿ ಸಚಿವರಾದ  ಸತೀಶ್ ಜಾರಕಿಹೊಳಿಯವರನ್ನು ಭೇಟಿ ಮಾಡಿ ಅಧಿಕೃತವಾಗಿ ಮನವಿಯನ್ನು ಸಲ್ಲಿಸಿದರು. ಶಾಸಕರ ಈ ಮನವಿಗೆ ತಕ್ಷಣವೇ ಸ್ಪಂದಿಸಿದ ಮಾನ್ಯ ಸಚಿವರು, ಮಂಗಳೂರಿನ ಹೈಕೋರ್ಟ್ ಸಂಚಾರಿ ಪೀಠದ ಕಟ್ಟಡಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಲೋಕೋಪಯೋಗಿ ಇಲಾಖೆಯಿಂದ ಒದಗಿಸಿಕೊಡುವುದಾಗಿ ಈ ಸಂದರ್ಭದಲ್ಲಿ ದೃಢವಾದ ಭರವಸೆ ನೀಡಿದ್ದಾರೆ.

Category
ಕರಾವಳಿ ತರಂಗಿಣಿ