image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಆಳ್ವಾಸ್‌ನಲ್ಲಿ ಮೇ 23ರಂದು ಯೋಗ ಮಹೋತ್ಸವ

ಆಳ್ವಾಸ್‌ನಲ್ಲಿ ಮೇ 23ರಂದು ಯೋಗ ಮಹೋತ್ಸವ

ಮೂಡುಬಿದಿರೆ: ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿಯಾಗಿ ಆಳ್ವಾಸ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜಿನವತಿಯಿಂದ ಭಾರತ ಸರ್ಕಾರದ ಆಯುಷ್ ಸಚಿವಾಲಯದ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ “ಯೋಗ ಮಹೋತ್ಸವ” ಕಾರ್ಯಕ್ರಮವನ್ನು ಮೇ 23ರಂದು ಮಿಜಾರಿನ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದೆ.

​“ಆರೋಗ್ಯ, ಜ್ಞಾನ ಮತ್ತು ವಿಶ್ವಶಾಂತಿಗಾಗಿ ಯೋಗ” ಎಂಬ ಮಹತ್ವದ ಆಶಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಯೋಗದ ಮೂಲಕ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ. ಸುಮಾರು 500ಕ್ಕೂ ಹೆಚ್ಚು ಯೋಗಾಸಕ್ತರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಳ್ವಾ ಫಾರ್ಮಸಿಯ ವ್ಯವಸ್ಥಾಪಕ ನಿರ್ದೇಶಕಿ ಡಾ. ಗ್ರೀಷ್ಮಾ ವಿವೇಕ್ ಆಳ್ವ ಭಾಗವಹಿಸಲಿದ್ದಾರೆ. ಯೋಗಾಸಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು ಕೋರಿದ್ದಾರೆ.

Category
ಕರಾವಳಿ ತರಂಗಿಣಿ