ಪುತ್ತೂರು: ಇರ್ದೆ ಬೈಲಾಡಿಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ವಿಷ್ಣುಮೂರ್ತಿ ದೇವಾಲಯ ಗೋಪಾಲಕ್ಷೇತ್ರದಲ್ಲಿ ಮೇ 25ರ ಸೋಮವಾರದಂದು ಶ್ರೀ ದೇವರ ಬಾಲಾಲಯ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವದಿಂದ ಜರುಗಲಿದೆ. ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ನೇತೃತ್ವದಲ್ಲಿ ಈ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪೂಮಾಣಿ ಕಿನ್ನಿಮಾಣಿ ರಾಜನ್ ದೈವಗಳ ಕಡಿಕೆ ಚಾವಡಿ ಬೆಂದ್ರ್ ತೀರ್ಥ ಇರ್ದೆ ಇಲ್ಲಿನ ಪವಿತ್ರ ಸನ್ನಿಧಿಯಲ್ಲಿ ಕಾರ್ಯಕ್ರಮಗಳು ನೆರವೇರಲಿವೆ.
ಮೇ 25ರ ಸೋಮವಾರ ಪೂರ್ವಾಹ್ನ ಗಂಟೆ 7-33 ರ ಮೀನ ಲಗ್ನದ ಸುಮುಹೂರ್ತದಲ್ಲಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ದಿವ್ಯ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಶ್ರೀ ದೇವರ ಬಾಲಾಲಯ ಪ್ರತಿಷ್ಠೆ ಸಂಪನ್ನಗೊಳ್ಳಲಿದೆ.
ಈ ಮಹತ್ಕಾರ್ಯದ ಅಂಗವಾಗಿ ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಶುಭಕರ ರೈ ಬಾಲ್ಯೊಟ್ಟುಗುತ್ತು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀ ವಿಠಲ ರೈ ಬಾಲ್ಯೊಟ್ಟುಗುತ್ತು, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶ್ರೀ ಶಶಿಕುಮಾರ್ ರೈ ಬಾಲ್ಯೊಟ್ಟು ಹಾಗೂ ಸಮಿತಿಯ ಸರ್ವ ಸದಸ್ಯರು ಮತ್ತು ಗ್ರಾಮಸ್ಥರು ಭಕ್ತಾಭಿಮಾನಿಗಳಿಗೆ ಆತ್ಮೀಯ ಆಮಂತ್ರಣ ನೀಡಿದ್ದಾರೆ.
ಈ ಅಪೂರ್ವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತನು-ಮನ-ಧನಗಳಿಂದ ಸಹಕರಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವಿನಂತಿಸಲಾಗಿದೆ.