image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಗೆ ಉಪರಾಷ್ಟ್ರಪತಿ ಭೇಟಿ: ಮೇ 30 ಮತ್ತು 31ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ದಕ್ಷಿಣ ಕನ್ನಡ ಜಿಲ್ಲೆಗೆ ಉಪರಾಷ್ಟ್ರಪತಿ ಭೇಟಿ: ಮೇ 30 ಮತ್ತು 31ರಂದು ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇ 30 ಹಾಗೂ 31ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಭೇಟಿ ನೀಡಲಿದ್ದಾರೆ.

​ಮೇ 30ರಂದು ಸಂಜೆ 4:25ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಅವರು, ಅಲ್ಲಿಂದ ಹೊರಟು ಸಂಜೆ 5:05ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್ ತಲುಪಲಿದ್ದಾರೆ. ಅಂದು ರಾತ್ರಿ ಧರ್ಮಸ್ಥಳದ ಅತಿಥಿಗೃಹದಲ್ಲಿಯೇ ಅವರು ವಾಸ್ತವ್ಯ ಹೂಡಲಿದ್ದಾರೆ.

ಮರುದಿನ, ಮೇ 31ರಂದು ಬೆಳಿಗ್ಗೆ 8 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿಯಲ್ಲಿ ಆಯೋಜಿಸಲಾಗಿರುವ 'ಸಿರಿ ಇಂಡಸ್ಟ್ರಿಯಲ್ ಪಾರ್ಕ್' ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 2:25ಕ್ಕೆ ಧರ್ಮಸ್ಥಳ ಹೆಲಿಪ್ಯಾಡ್‌ಗೆ ಮರಳಿ, ಅಲ್ಲಿಂದ ಹೊರಟು 3:05ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಅವರು ಮಂಗಳೂರಿನಿಂದ ಕೇರಳದ ಕಣ್ಣೂರಿಗೆ ನಿರ್ಗಮಿಸಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.

Category
ಕರಾವಳಿ ತರಂಗಿಣಿ