image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮಂಗಳೂರಿಗೆ ಆಗಮನ: ಧರ್ಮಸ್ಥಳಕ್ಕೆ ಭೇಟಿ, ಬಿಗಿ ಬಂದೋಬಸ್ತ್

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಮಂಗಳೂರಿಗೆ ಆಗಮನ: ಧರ್ಮಸ್ಥಳಕ್ಕೆ ಭೇಟಿ, ಬಿಗಿ ಬಂದೋಬಸ್ತ್

ಮಂಗಳೂರು: ಭಾರತದ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಶನಿವಾರ ಮಂಗಳೂರಿಗೆ ಆಗಮಿಸಿದರು. ವಾಯುಪಡೆಯ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಉಪರಾಷ್ಟ್ರಪತಿಯವರನ್ನು ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಉಪಸ್ಥಿತರಿದ್ದು, ಉಪರಾಷ್ಟ್ರಪತಿಯವರನ್ನು ಬರಮಾಡಿಕೊಂಡರು.

ವಿಮಾನ ನಿಲ್ದಾಣದಿಂದ ಅವರು ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ತೆರಳಿ, ಅಲ್ಲಿನ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿದರು. ರವಿವಾರ ಬೆಳಿಗ್ಗೆ ಅವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಲಿದ್ದು, ಆ ಬಳಿಕ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಲಿರುವ ಸಿರಿ ಕೈಗಾರಿಕಾ ಪಾರ್ಕ್ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಉಪರಾಷ್ಟ್ರಪತಿಗಳ ಈ ಭೇಟಿಯ ಹಿನ್ನೆಲೆಯಲ್ಲಿ ಮಂಗಳೂರು ವಿಮಾನ ನಿಲ್ದಾಣ ಹಾಗೂ ಧರ್ಮಸ್ಥಳದಾದ್ಯಂತ ಕಟ್ಟುನಿಟ್ಟಿನ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

Category
ಕರಾವಳಿ ತರಂಗಿಣಿ